20ರಂದು ಬನ್ನೂರಲ್ಲಿ ಪ್ರಜಾಧ್ವನಿ ಸಮಾವೇಶ

14tnpnewsfile01
Published on


ತಿ.ನರಸೀಪುರ: ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಸಾಧ್ಯತೆ ಹೆಚ್ಚಿದ್ದು, ಅಧಿಕಾರಕ್ಕೆ ಬಂದ ನಂತರ ಆದ್ಯತೆ ಮೇಲೆ ಅಭಿವೃದ್ಧಿ ಕೆಲಸ ಮಾಡಲಾಗುವುದು ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.
ಫೆ.20ರಂದು ಬನ್ನೂರು ಪಟ್ಟಣದ ರತ್ನಮಹಲ್ ಚಿತ್ರಮಂದಿರದ ಆವರಣದಲ್ಲಿ ಆಯೋಜಿಸಿರುವ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದ ಹಿನ್ನೆಲೆಯಲ್ಲಿ ಚಾಮನಹಳ್ಳಿಯ ಎ.ಎನ್.ಸ್ವಾಮಿ ಎಂಬುವರ ತೋಟದಲ್ಲಿ ಸೋಮವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್ ಕೊನೆ ವಾರದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಸಂಭವವಿದ್ದು, ಏಪ್ರಿಲ್ ಕೊನೆವಾರ ಅಥವಾ ಮೇ ಮೊದಲ ವಾರದಲ್ಲಿ ಚುನಾವಣೆ ನಡೆಯಲಿದೆ ಎಂದರು. ಫೆ.20ರಂದು ಬನ್ನೂರು ಪಟ್ಟಣದಲ್ಲಿ ಪ್ರಜಾಧ್ವನಿ ಸಮಾವೇಶ ನಡೆಯಲಿದ್ದು, ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ. ಅವರನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲು ಕಾರ್ಯಕರ್ತರು ಈಗಿನಂದಲೇ ತಯಾರಿ ಮಾಡಿಕೊಳ್ಳಬೇಕು. 10,000 ಜನ ಅಂದಿನ ಸಮಾವೇಶದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ತಿ.ನರಸೀಪುರ ಕ್ಷೇತ್ರದಲ್ಲಿ ಜನರ ಆಲೋಚನೆ, ರಾಜಕೀಯ ಚಿಂತನೆ ಈಗ ಬದಲಾಗಿದೆ. ಅಭಿವೃದ್ಧಿ ಬಗ್ಗೆ ನೆನಸಿಕೊಳ್ಳೋದು ಜನರ ದೊಡ್ಡತನ ಎಂದು ಅವರು, ಜಿಲ್ಲೆಯ 11 ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವಿನ ವಾತಾವರಣ ಇದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net