21 ಕೋಟಿ ಜನ ಬಡತನ ರೇಖೆಗಿಂತ ಮೇಲೆ

Govinda M Karajola
Published on

ಚಿತ್ರದುರ್ಗ: ದೇಶದ 25 ಕೋಟಿ ಜನ ಬಡತನ ರೇಖೆಗಿಂತ ಮೇಲೆ ಬಂದಿದ್ದಾರೆ. ಮುಂದಿನ 3 ವರ್ಷಗಳಲ್ಲಿ ಭಾರತ ಶ್ರೀಮಂತ ರಾಷ್ಟ್ರಗಳ ಪಟ್ಟಿಯಲ್ಲಿ ವಿಶ್ವದಲ್ಲೇ 3ನೇ ಸ್ಥಾನಕ್ಕೆ ಏರಲಿದೆ. ಆದ್ದರಿಂದ ಮೋದಿ ಪ್ರಧಾನಿಯಾಗಿಸಲು ಬಿಜೆಪಿಗೆ ಮತ ನೀಡಿ ಎಂದು ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೋವಿಂದ ಎಂ ಕಾರಜೋಳ ಮನವಿ ಮಾಡಿದರು.

ಉಮಾಪತಿ ಕಲ್ಯಾಣ ಮಂಟಪದಲ್ಲಿ ಸೋಮವಾರ ನಡೆದ ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿ, ದೇಗುಲಗಳಷ್ಟೇ ಶೌಚಗೃಹಗಳು ಮುಖ್ಯ. ಹೀಗಾಗಿ ಪ್ರಧಾನಿ ಅವರು ದೇಶದಲ್ಲಿ 11 ಕೋಟಿ ಶೌಚಗೃಹ ನಿರ್ಮಿಸಿದ್ದಾರೆ. 10 ವರ್ಷದ ಕೇಂದ್ರ ಸರ್ಕಾರದ ಸಾಧನೆ ನಗರ, ಪಟ್ಟಣ, ಗ್ರಾಮೀಣ ಭಾಗ ಒಳಗೊಂಡು ಪ್ರತಿ ಬೂತ್‌ನ ಮತದಾರರಿಗೆ ತಲುಪಿಸುವ ಕಾರ್ಯಕ್ಕೆ ಮುಂದಾಗಿ ಎಂದು ಕಾರ್ಯಕರ್ತರಿಗೆ ಹೇಳಿದರು.

ಬಡವರ ಮಕ್ಕಳು ವೈದ್ಯರಾಗಬೇಕೆಂಬ ಉದ್ದೇಶದಿಂದ ದೇಶದಲ್ಲಿ ಹೆಚ್ಚೆಚ್ಚು ವೈದ್ಯಕೀಯ ಕಾಲೇಜುಗಳ ನಿರ್ಮಾಣಕ್ಕೆ ಪ್ರಧಾನಿ ಒತ್ತು ಕೊಟ್ಟ ಕಾರಣ 10 ವರ್ಷದೊಳಗೆ 1.5 ಲಕ್ಷ ಮಂದಿ ವೈದ್ಯರಾಗಿ ಹೊರಹೊಮ್ಮಿದ್ದಾರೆ. ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಅವಧಿಯಲ್ಲಿ ಜಾರಿಯಾದ ಎಲ್ಲ ಯೋಜನೆಗಳನ್ನು ರದ್ದುಗೊಳಿಸಿ, ಭಂಡತನ ಪ್ರದರ್ಶಿಸಿದ ಸಿಎಂ ಸಿದ್ದರಾಮಯ್ಯಗೆ ಈ ಚುನಾವಣೆಯಲ್ಲೇ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net