ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮೊದಲ ದಿನ 210 ವಿದ್ಯಾರ್ಥಿಗಳು ಗೈರು

sslc exam
ಎಸ್‌ಎಸ್‌ಎಲ್‌ಸಿ ಪರೀಕ್ಷೆಗೂ ಮುನ್ನ ಪಾಲಕರು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.
Published on

ಶಿವಮೊಗ್ಗ: ಜಿಲ್ಲೆಯಲ್ಲಿ ಶುಕ್ರವಾರ ಆರಂಭಗೊಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಸೂತ್ರವಾಗಿ ನಡೆಯಿತು. ಜಿಲ್ಲಾದ್ಯಂತ ಮೊದಲ ದಿನವೇ ಪ್ರಥಮ ಭಾಷೆ ವಿಷಯದಲ್ಲಿ 210 ವಿದ್ಯಾರ್ಥಿಗಳು ಗೈರು ಹಾಜರಾದರು.

79 ಕೇಂದ್ರಗಳಲ್ಲಿ ಸಿಸಿ ಟಿವಿ ಮತ್ತು ವೆಬ್‌ಕಾಸ್ಟಿಂಗ್ ನಿಗಾದಲ್ಲಿ ಪರೀಕ್ಷೆ ನಡೆಯಿತು. ನೋಂದಣಿಯಾಗಿದ್ದ 22,554 ವಿದ್ಯಾರ್ಥಿಗಳ ಪೈಕಿ 22,344 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಶಿವಮೊಗ್ಗ ತಾಲೂಕಿನಲ್ಲಿ ಗರಿಷ್ಠ 84, ಹೊಸನಗರ ತಾಲೂಕಿನಲ್ಲಿ ಕನಿಷ್ಠ 8 ವಿದ್ಯಾರ್ಥಿಗಳು ಪರೀಕ್ಷೆಯಿಂದ ದೂರ ಉಳಿದರು. ಉಳಿದಂತೆ ಭದ್ರಾವತಿ 39, ಸಾಗರ 32, ಶಿಕಾರಿಪುರ 24, ಸೊರಬ ಮತ್ತು ತೀರ್ಥಹಳ್ಳಿಯಲ್ಲಿ ತಲಾ 11 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾದರು.

ಕಳೆದ ವರ್ಷದಂತೆ ಈ ಬಾರಿಯೂ ಪ್ರತಿ ಕೊಠಡಿಯಲ್ಲಿ ಸಿಸಿ ಟಿವಿ ಅಳವಡಿಸಲಾಗಿತ್ತು. ವೆಬ್‌ಕಾಸ್ಟಿಂಗ್ ಮೂಲಕ 3 ಹಂತದಲ್ಲಿ ವೀಕ್ಷಣೆ ಮಾಡುವ ಮೂಲಕ ನಕಲು ಮಾಡದಂತೆ ಬಿಗಿ ಕ್ರಮ ಕೈಗೊಳ್ಳಲಾಗಿತ್ತು. ಪರೀಕ್ಷೆಯನ್ನು ಶಾಂತಿಯುತ ಮತ್ತು ಪಾರದರ್ಶಕವಾಗಿ ನಡೆಸಲು ಶಿಕ್ಷಣ ಇಲಾಖೆ ಕೈಗೊಂಡ ಕಾರ್ಯಗಳು ಫಲ ನೀಡಿದವು. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.ಮೊಬೈಲ್ ಸೇರಿ ಯಾವುದೇ ವಿದ್ಯುನ್ಮಾನ ಉಪಕರಣಗಳಿಗೆ ಅವಕಾಶ ಇರಲಿಲ್ಲ. ಪೊಲೀಸ್ ಇಲಾಖೆಯಿಂದಲೂ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಭದ್ರತೆ ಕಲ್ಪಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net