

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದೆ.
ಜು.21ರಂದು ಬೆಲಗ್ಗೆ 10ರಿಂದ 12ಗಂಟೆಯವರೆಗೂ ಪತ್ರಿಕೆ-1 ಮತ್ತು ಅದೇ ದಿನ ಮಧ್ಯಾಹ್ನ 2ರಿಂದ 4 ಗಂಟೆಯವರೆಗೂ ಪತ್ರಿಕೆ-2ರ ಪರೀಕ್ಷೆ ನಡೆಯಲಿದೆ ಎಂದು ಕೆಪಿಎಸ್ಸಿ ಕಾರ್ಯದರ್ಶಿ ಡಾ. ರಾಕೇಶ್‌ಕುಮಾರ್ ಕೆ. ತಿಳಿಸಿದ್ದಾರೆ.