22ರಂದು ರಜೆ ಘೋಷಿಸಲು ಬಿ.ವೈ.ವಿಜಯೇಂದ್ರ ಆಗ್ರಹ

byv
Published on

ಬೆಂಗಳೂರು:
ಅಯೋಧ್ಯೆಯ ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯವನ್ನು ವೀಕ್ಷಿಸಲು ಅನುವಾಗುವಂತೆ ಜ.22ರಂದು ರಾಜ್ಯ ಸರ್ಕಾರ ರಜೆ ಘೋಷಿಸಲಿ ಎಂದು ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯ ಮಟ್ಟದ ಸಮಾವೇಶದಲ್ಲಿ ಮಾತನಾಡಿ, ಈಗಾಗಲೇ ಅನೇಕ ರಾಜ್ಯಗಳು 22ರಂದು ರಜೆ ಘೋಷಿಸಿದ್ದು, ಕೇಂದ್ರ ಸರಕಾರವೂ ಅರ್ಧ ದಿನ ರಜೆ ಘೋಷಿಸಿದೆ. ಆದ್ದರಿಂದ ರಾಜ್ಯ ಸರಕಾರವೂ ರಜೆ ಪ್ರಕಟಿಸಬೇಕು ಎಂದು ಒತ್ತಾಯಿಸಿದರು.
ಹಿಂದು ಸಮಾಜಕ್ಕೆ ಈ ಪ್ರಾಣ ಪ್ರತಿಷ್ಠಾಪನೆ ಕಾರ್ಯ ಮಹತ್ವವಾಗಿದ್ದು, ಅದನ್ನು ವೀಕ್ಷಿಸಲು ಈ ಮೂಲಕ ಅವಕಾಶ ಮಾಡಿಕೊಡಿ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net