ಪ್ರಧಾನಿ ಮೋದಿ ಕೊಲ್ಲುವುದಾಗಿ ಬೆದರಿಕೆ: ಬಂಧಿತ ಯುವಕನ ಹೇಳಿಕೆ ಕೇಳಿ ಪೊಲೀಸರೇ ಶಾಕ್​!

Police
Published on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಕರೆ ಮಾಡಿದ 22 ವರ್ಷದ ಯುವಕನನ್ನು ದೆಹಲಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಬಂಧಿತನನ್ನು ಸಲ್ಮಾನ್​ ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಕರೆ ಮಾಡಿ ಪ್ರಧಾನಿಯನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಈಶಾನ್ಯ ದೆಹಲಿಯ ಖಜೋರಿ ಖಾಸ್ ಠಾಣೆಯ ಪೊಲೀಸರು ಬಂಧಿಸಿದ್ದು, ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಆರೋಪಿಯ ವಿಚಾರಣೆಯನ್ನು ನಡೆಸಲಿದ್ದಾರೆ.

ಆರೋಪಿ ಸಲ್ಮಾನ್​ ವಿರುದ್ಧ ಈಗಾಗಲೇ ಅನೇಕ ಪೊಲೀಸ್​ ಪ್ರಕರಣಗಳಿದ್ದು, ಜಾಮೀನಿನ ಮೇಲೆ ಹೊರಗಿದ್ದಾನೆಂಬುದು ಪೊಲೀಸ್ ವಿಚಾರಣೆ ವೇಳೆ ತಿಳಿದುಬಂದಿದೆ. ಜೈಲಿಗೆ ವಾಪಸ್ಸು ಬರಲು ಬೆದರಿಕೆ ಕರೆ ಮಾಡಿದ್ದಾಗಿ ಆರೋಪಿ ಬಾಯ್ಬಿಟ್ಟಿದ್ದಾನೆ.

ಕಳೆದ ಜನವರಿಯಲ್ಲೂ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿತ್ತು. ಬಂಧಿತ ಆರೋಪಿ ಅಮಿತ್​ ಷಾ ಮತ್ತು ಪ್ರಧಾನಿ ಮೋದಿಯನ್ನು ಕೊಲೆ ಮಾಡುವುದಾಗಿ ಬೆದರಿಕೆ ಕರೆ ಮಾಡಿದ್ದ. ಸಿಎಎ ಮತ್ತು ಎನ್​ಆರ್​ಸಿ ಅನುಷ್ಠಾನ ಹಿನ್ನೆಲೆಯಲ್ಲಿ ಬೆದರಿಕೆ ಕರೆ ಮಾಡಿದ್ದ ಎಂದು ತಿಳಿದುಬಂದಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net