ಸೇನಾ ನೆಲೆಯನ್ನು ಗುರಿಯಾಗಿಸಿ ಆತ್ಮಾಹುತಿ ಬಾಂಬ್​ ದಾಳಿ; 24 ಮಂದಿ ಮೃತ್ಯು

Suicide Bomber
Published on

ನವದೆಹಲಿ: ಸೇನಾ ನೆಲೆಯನದ್ನು ಗುರಿಯಾಗಿಸಿಕೊಂಡು ಉಗ್ರರು ನಡೆಸಿದ ಆತ್ಮಾಹುತಿ ಬಾಂಬ್​ ದಾಳಿಯಲ್ಲಿ 24 ಮಂದಿ ಮೃತಪಟ್ಟಿರುವ ಘಟನೆ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಡೇರಾ ಇಸ್ಮಾಯಿಲ್ ಖಾನ್ ನಗರದಲ್ಲಿ ನಡೆದಿದೆ.

ಮಂಗಳವಾರ ಮುಂಜಾನೆ ಘಟನೆ ನಡೆದಿದ್ದು, ದಾಳಿಯ ಹೊಣೆಯನ್ನು ತಾಲಿಬಾನ್​ ಜೊತೆ ನಿಕಟ ಸಂಪರ್ಕ ಹೊಂದಿರುವ ತೆಹ್ರೀಕ್-ಎ-ಜಿಹಾದ್ ಪಾಕಿಸ್ತಾನಸಂಘಟನೆ ಹೊತ್ತುಕೊಂಡಿದ್ದು, ಘಟನೆಯಲ್ಲಿ 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಪಾಕಿಸ್ತಾನ ಸೇನೆಯ ಹಿರಿಯ ಅಧಿಕಾರಿಯೊಬ್ಬರು, ಮುಂಜಾನೆ 2:30ರ ಸುಮಾರಿಗೆ ದುರ್ಘಟನೆ ಸಂಭವಿಸಿದ್ದು, ತಾಲಿಬಾನ್​ ಜೊತೆ ನಿಕಟ ಸಂಬಂಧ ಹೊಂದಿರುವ ತೆಹ್ರೀಕ್-ಎ-ಜಿಹಾದ್ ಪಾಕಿಸ್ತಾನ್ ಸಂಘಟನೆಯು ದಾಳಿಯ ಹೊಣೆ ಹೊತ್ತಿದ್ದು, ಮುರು ಕಟ್ಟಡಗಳು ನೆಲಸಮಗೊಂಡಿವೆ.

ಕಟ್ಟಡದ ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿದಂ ಸಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ 30ಕ್ಕೂ ಅಧಿಕ ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಲಾಗಿದೆ ಎಂದು ಪಾಕಿಸ್ತಾನ ಸೇನೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net