VIDEO| ಚಾಕುವಿನಿಂದ ಇರಿದು ಯುವಕನ ಹತ್ಯೆ; ಕಾರಣ ನಿಗೂಢ

Delhi Crime
Published on

ನವದೆಹಲಿ: ಅಪರಿಚಿತ ವ್ಯಕ್ತಿಗಳಿಬ್ಬರು ಯುವಕನನ್ನು ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನವದೆಹಲಿಯ ನೆಬ್​ಸರೈ ಪ್ರದೇಶದಲ್ಲಿ ನಡೆದಿದೆ.

ಮೃತರನ್ನು ರಾಜು ಪಾರ್ಕ್​ ನಿವಾಸಿ ಸಚಿನ್​(23) ಎಂದು ಗುರುತಿಸಲಾಗಿದ್ದು ಹತ್ಯೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಡಿಸಿಪಿ ಚಂದನ್​ ಚೌಧರಿ ವಿಷಯ ತಿಳಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು ಗಾಯಾಳುವನ್ನು AIIMS ಆಸ್ಪತ್ರೆಗೆ ದಾಖಲಿಸಿದ್ಧಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾನೆ.

ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾಗಿರುವುದರಿಂದ ಪ್ರದೇಶದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದ್ದು ಆರೋಪಿಗಳ ಬಂಧನ್ಕಕೆ ತಂಡವನ್ನು ರಚಿಸಿ ಬಲೆ ಬೀಸಲಾಗಿದೆ ಎಂದು ಡಿಸಿಪಿ ಚಂದನ್​ ಚೌಧರಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net