ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ ಎಲ್‌ಪಿಯು 24 ವಿದ್ಯಾರ್ಥಿಗಳು

LPU olimpics
Published on

ಬೆಂಗಳೂರು ಭಾರತದ ಪ್ರಮುಖ ವಿಶ್ವವಿದ್ಯಾನಿಲಯಗಳಲ್ಲಿ ಒಂದಾದ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ (ಎಲ್‌ಪಿಯು) ಪ್ಯಾರಿಸ್-2024ರ ಒಲಿಂಪಿಕ್ಸ್‌ಗಾಗಿ ಭಾರತೀಯ ತಂಡದ ಶೇ.21 ಕ್ರೀಡಾಪಟುಗಳು ಎಲ್‌ಪಿಯು ವಿದ್ಯಾರ್ಥಿಗಳಾಗಿದ್ದಾರೆ.

ವಿಶ್ವವಿದ್ಯಾನಿಲಯದ 24 ವಿದ್ಯಾರ್ಥಿಗಳು ಜಾಗತಿಕ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸುವ ಪ್ರತಿಷ್ಠಿತ ಅವಕಾಶವನ್ನು ಗಳಿಸಿದ್ದಾರೆ. ಕ್ರೀಡೆ ಮತ್ತು ಶಿಕ್ಷಣದಲ್ಲಿ ಶ್ರೇಷ್ಠತೆಗೆ ವಿಶ್ವವಿದ್ಯಾನಿಲಯದ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ. ಜಾವೆಲಿನ್, ಕುಸ್ತಿ, ಹಾಕಿ, ಅಥ್ಲೆಟಿಕ್ಸ್, ವೇಟ್‌ಲಿಫ್ಟಿಂಗ್, ಶೂಟಿಂಗ್, ಬಾಕ್ಸಿಂಗ್ ಸೇರಿ ವಿವಿಧ ಕ್ರೀಡಾ ವಿಭಾಗಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ.

ಪುರುಷರ ಜಾವೆಲಿನ್ ಎಸೆತದಲ್ಲಿ ನೀರಜ್ ಚೋಪ್ರಾ (ಬಿಎ), ಮಹಿಳೆಯರ 49 ಕೆಜಿ ವಿಭಾಗದಲ್ಲಿ ತಾರಾ ವೇಟ್‌ಲಿಫ್ಟರ್ ಸೈಖೋಮ್ ಮೀರಾಬಾಯಿ ಚಾನು (ಎಂ.ಎ. ಮನಃಶಾಸ), ಭಾರತೀಯ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್, ಹಾರ್ದಿಕ್ ಸಿಂಗ್, ಶಮಹರ್ ಸಿಂಗ್, ಮನ್‌ದೀಪ್ ಸಿಂಗ್, ಸುಖ್‌ಜಿತ್ ಸಿಂಗ್ (ಎಲ್ಲರೂ ಬಿಎ ಓದುತ್ತಿದ್ದಾರೆ), ಮನ್‌ಪ್ರೀತ್ ಸಿಂಗ್, ಗುರ್ಜಂತ್ (ಎಂಬಿಎ), ಮತ್ತು ಜನ್ನನ್ ಪ್ರೀತ್ ಸಿಂಗ್.

ಈ ಕುರಿತು ಸಂತಸ ವ್ಯಕ್ತಪಡಿಸಿರುವ ರಾಜ್ಯಸಭಾ ಸದಸ್ಯರಾಗಿರುವ ಎಲ್‌ಪಿಯು ಸಂಸ್ಥಾಪಕ ಕುಲಾಧಿಪತಿ ಡಾ. ಅಶೋಕ್ ಕುಮಾರ್ ಮಿತ್ತಲ್, ಒಲಿಂಪಿಕ್ಸ್ ಭಾರತೀಯ ತಂಡದಲ್ಲಿ ಭಾಗವಹಿಸಿರುವ ನಮ್ಮ ಎಲ್ಲ ವಿದ್ಯಾರ್ಥಿಗಳನ್ನು ಅಭಿನಂದಿಸುತ್ತೇನೆ. ಯಾವುದೇ ವಿಶ್ವವಿದ್ಯಾನಿಲಯಕ್ಕೆ, ಒಬ್ಬ ವಿದ್ಯಾರ್ಥಿಯು ಭಾರತವನ್ನು ಒಲಿಂಪಿಕ್ಸ್‌ನಲ್ಲಿ ಪ್ರತಿನಿಧಿಸುವುದು ಗಮನಾರ್ಹ ಸಾಧನೆಯಾಗಿದೆ. ಆದರೆ, 24 ವಿದ್ಯಾರ್ಥಿಗಳನ್ನು ಹೊಂದುವುದು ನಮಗೆ ತುಂಬಾ ಹೆಮ್ಮೆಯ ವಿಷಯವಾಗಿದೆ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net