ಬಿಡದಿ ಬಳಿಯ ತೋಟದ ಮನೆಯಲ್ಲಿ 25 ಮನುಷ್ಯರ ತಲೆಬುರುಡೆಗಳು ಪತ್ತೆ

skeleton
Published on

ರಾಮನಗರ: ತೋಟದ ಮನೆಯೊಂದರಲ್ಲಿ 25 ಮನುಷ್ಯರ ತಲೆಬುರುಡೆಗಳು ಪತ್ತೆಯಾಗಿವೆ. ಬಿಡದಿ ಬಳಿಯ ಜೋಗನಹಳ್ಳಿ ಗ್ರಾಮದ ಸಮೀಪದ ತೋಟದ ಮನೆಯಲ್ಲಿ ಬಲರಾಮ್ ತಲೆ ಬುರಡೆಗಳನ್ನು ಸಂಗ್ರಹಿಸಿ ಅವುಗಳಿಂದ ಮಾಟ-ಮಂತ್ರ ಮಾಡುತ್ತಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಭಾನುವಾರ ಮಹಾ ಶಿವರಾತ್ರಿಯ ಅಮವಾಸ್ಯೆ ಮುಗಿದಿದ್ದು, ಬಲರಾಮ್ ಸ್ಮಶಾನದಲ್ಲಿ ತಲೆ ಬುರಡೆಗಳಿಗೆ ಪೂಜೆ ಮಾಡುತ್ತಿದ್ದದನ್ನು ನೋಡಿದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರ ದೂರಿನ ಮೇರೆಗೆ ಪೊಲೀಸರು ಬಲರಾಮ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಬಲರಾಮ್ ತೋಟದ ಮನೆಯಲ್ಲಿ ಅನೇಕ ಮಾನವರ ತಲೆ ಬುರಡೆಗಳು ಪತ್ತೆಯಾಗಿವೆ. ತಾತನ ಕಾಲದಿಂದಲೂ ಬುರುಡೆ ಪೂಜೆ ಮಾಡುತ್ತಾ ಬಂದಿದ್ದೇವೆ ಎಂದು ಬಲರಾಮ್ ತಿಳಿಸಿದ್ದಾರೆ. ಸದ್ಯ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ. ಪೊಲೀಸರು ಭೇಟಿ ನೀಡಿದ ವೇಳೆ ಮನೆಯಲ್ಲಿ ಕಂಡುಬಂದ ತಲೆ ಬುರಡೆಗಳು, ಮೂಳೆಗಳ ಫೋಟೋಗಳು ಹಾಗೂ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net