

ನವದೆಹಲಿ: ಪ್ರತ್ಯೇಕ ಬಸ್ (Bus) ಅಪಘಾತದಲ್ಲಿ 25 ಮಂದಿ ಮೃತಪಟ್ಟು ಅನೇಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೆಕ್ಸಿಕೋದ ಉತ್ತರ ಹಾಗೂ ದಕ್ಷಿಣ ಭಾಗದಲ್ಲಿ ನಡೆದಿದೆ.
ದೇಶದ ಉತ್ತರ ಭಾಗದಲ್ಲಿ ಟ್ರ್ಯಾಕ್ಟರ್ ಹಾಗೂ ಬಸ್ಸಿನ ನಡುವೆ ಸಂಭಿಸಿದ ಭೀಕರ ಅಪಘಾತದಲ್ಲಿ 14 ಮಂದಿ ಮೃತಪಟ್ಟಿದ್ದು, ದಕ್ಷಿಣ ಮೆಕ್ಸಿಕೋದ ಓಕ್ಸಾಕದಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 11 ಮಂದಿ ಮೃತಪಟ್ಟಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಅತಿವೇಗ ಚಾಲನೆಯೇ ಅವಘಡಕ್ಕೆ ಕಾರಣ ಎಂದು ಹೇಳಲಾಗಿದ್ದು, ಈ ಬಗ್ಗೆ ಅಧಿಕಾರಿಗಳು ವಿಸ್ತೃತ ತನಿಖೆ ನಡೆಸುತ್ತಿದ್ದಾರೆ. ವರದಿ ಆಧರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.