

ಚಿತ್ರದುರ್ಗ :ವಿಶ್ವ ಅಂಗವಿಕಲರ ದಿನಾಚರಣೆ ಅಂಗವಾಗಿ ನ.25ರ ಬೆಳಗ್ಗೆ 10ಕ್ಕೆ ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಅಂಗವಿಕಲರ ಜಿಲ್ಲಾ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಕ್ರೀಡಾ ಸ್ಪರ್ಧೆ ವಿಭಾಗದಲ್ಲಿ 18 ವರ್ಷ ಮೇಲ್ಪಟ್ಟ ಶ್ರವಣ ದೋಷ ಮತ್ತು ದೈಹಿಕ ವಿಕಲರಿಗೆ 100 ಮೀ ಓಟ, ಗುಂಡು ಎಸೆತ, ಜಾವಲಿನ್ ಥ್ರೋ ಮತ್ತು ಬುದ್ಧಿಮಾಂದ್ಯರಿಗೆ 100 ಮೀ ಓಟ, ಬಕೆಟ್‌ನಲ್ಲಿ ರಿಂಗ್‌ಎಸೆತ, ಮ್ಯೂಜಿಕಲ್ ಚೇರ್ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಅಂಧರಿಗೆ ಮಡಕೆ ಒಡೆಯು ವುದು, ಕೇನ್ ರೇಸ್ ಆಯೋಜಿಸಲಾಗಿದೆ. ಸಾಂಸ್ಕೃತಿಕ ಸ್ಪರ್ಧೆ ವಿಭಾಗದಲ್ಲಿ 18 ವರ್ಷ ಮೇಲ್ಪಟ್ಟ ದೃಷ್ಟಿ ದೋಷ, ದೈಹಿಕ ಮತ್ತು ಬೌದ್ಧಿಕ ವಿಕಲರಿಗೆ ಜಾನಪದ ಗೀತೆ, ಭಾವಗೀತೆ, ಭಕ್ತಿಗೀತೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾ ಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.