26/11 ಆರೋಪಿ ತಹವ್ವುರ್ ರಾಣಾಗೆ ಭಾರೀ ಹಿನ್ನಡೆ; ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್​

Tahawwur Rana
Published on

ನವದೆಹಲಿ: 26/11 ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್​ ತಹವ್ವುರ್ ರಾಣಾ ತನ್ನನ್ನು ಭಾರತಕ್ಕೆ ಹಸ್ತಾಂತರ ಮಾಡಬಾರದೆಂದು ಅಮೆರಿಕದ ಸುಪ್ರೀಂ ಕೋರ್ಟ್ (SupremeCourt) ಮೊರೆ ಹೋಗಿದ್ದು, ಈತನ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

ಪಾಕಿಸ್ತಾನಿ ಮೂಲದ ಕೆನಡಾದ ಪ್ರಜೆ ರಾಣಾ, ಅಮೆರಿಕದ ಸುಪ್ರೀಂ ಕೋರ್ಟ್‌ನ ಅಸೋಸಿಯೇಟ್ ನ್ಯಾಯಮೂರ್ತಿ ಮತ್ತು ಒಂಬತ್ತನೇ ಸರ್ಕ್ಯೂಟ್‌ನ ಸರ್ಕ್ಯೂಟ್ ನ್ಯಾಯಮೂರ್ತಿಗೆ ತನ್ನನ್ನು ಭಾರತಕ್ಕೆ ಹಸ್ತಾಂತರಿಸುವ ಸರ್ಕಾರದ ನಿರ್ಧಾರಕ್ಕೆ ತುರ್ತು ಅರ್ಜಿ ನೀಡಬೇಕಾಗಿ ಕೋರ್ಟ್ ಮೊರೆ ಹೋಗಿದ್ದರು. 

Mumbai Blast

ನಾನು ಪಾಕಿಸ್ತಾನಿ ಮೂಲದವನಾಗಿರುವುದರಿಂದ ಭಾರತದಲ್ಲಿ ನನಗೆ ಚಿತ್ರಹಿಂಸೆ ನೀಡಲಾಗುತ್ತದೆ. ಏಕೆಂದರೆ, ಭಾರತಕ್ಕೆ ಹಸ್ತಾಂತರಿಸಿದರೆ, ನನಗೆ ಚಿತ್ರಹಿಂಸೆಗೆ ಒಳಗಾಗುವ ಗಣನೀಯ ಆಧಾರಗಳಿದ್ದು, ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದೇನೆ. ಈ ಕಾರಣಕ್ಕಾಗಿ ನ್ಯಾಯಾಲಯ ಕೂಡಲೇ ಹಸ್ತಾಂತರ ಪ್ರಕ್ರಿಯೆಗೆ ತಡೆ ನೀಡಬೇಕೆಂದು ತಹವ್ವುರ್ ರಾಣಾ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದರು. 

ತಹವ್ವುರ್ ರಾಣಾ ಪಾಕಿಸ್ತಾನ ಮೂಲದವನಾಗಿದ್ದು, ಸದ್ಯ ಕೆನೆಡಾದಲ್ಲಿ ವಾಸಿಸುತ್ತಿದ್ದಾನೆ. ಸದ್ಯ ಆತನನ್ನು ಲಾಸ್ ಏಂಜಲೀಸ್ ಜೈಲಿನಲ್ಲಿ ಇರಿಸಲಾಗಿದ್ದು, ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ನೇತೃತ್ವದ ಸರ್ಕಾರ ಅಧಿಕಾರಕ್ಕೇರುತ್ತಿದ್ದಂತೆ 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್​ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವುದಾಗಿ ಘೋಷಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net