ಆಗಸ್ಟ್ 26ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ -3ರ ಫಲಿತಾಂಶ: ಇಲ್ಲಿದೆ ಫಲಿತಾಂಶದ ಲಿಂಕ್

SSLC Exam
Published on

ಬೆಂಗಳೂರು ಆಗಸ್ಟ್ ಮೊದಲ ವಾರದಲ್ಲಿ ನಡೆಸಲಾಗಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ-3ರ ಫಲಿತಾಂಶವನ್ನು ಸೋಮವಾರ (ಆ.26) ಮಧ್ಯಾಹ್ನ 12 ಗಂಟೆಗೆ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.

ಆ.2 ರಿಂದ 9 ರವರೆಗೆ ರಾಜ್ಯಾದ್ಯಂತ ಒಟ್ಟು 410 ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗಿತ್ತು. 97 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದೀಗ ಪರೀಕ್ಷಾ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಸೋಮವಾರ ಮಧ್ಯಾಹ್ನ 12 ಗಂಟೆಗೆ

ವೆಬ್‌ಸೈಟ್‌ https://karresults.nic.in ನಲ್ಲಿ ಪ್ರಕಟಿಸಲಾಗುವುದು ಎಂದು ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net