

ಬೆಂಗಳೂರು: ಕಾವೇರಿ ಜಲಾನಯನದ ಪ್ರಮುಖ ಅಣೆಕಟ್ಟುಗಳಲ್ಲಿ ಸರಾಸರಿ ಶೇ. 62 ರಷ್ಟು ಮಾತ್ರ ನೀರಿನ ಲಭ್ಯತೆಯಿದೆ. ಶೇ.28ರಷ್ಟು ನೀರಿನ ಕೊರತೆ ಕಂಡುಬಂದಿದೆ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಸಾಕಷ್ಟು ಕೊರತೆ ಉಂಟಾಗಿತ್ತು. ನಾಲ್ಕು ವರ್ಷಗಳ ಹಿಂದೆ ಸಮೃದ್ಧವಾಗಿ ಮಳೆಯಾದ ಕಾರಣ ಕೊರತೆ ಕಂಡು ಬಂದಿರಲಿಲ್ಲ ಎಂದರು.
ಕಬಿನಿಯಿಂದ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆಯೇ ಎಂಬ ಪ್ರಶ್ನೆಗೆ, ಕಬಿನಿಯು ಶೇ.96ರಷ್ಟು ತುಂಬಿದ್ದು ಅಣೆಕಟ್ಟಿನ ಸುರಕ್ಷತೆ ದೃಷ್ಟಿಯಿಂದ ಒಳಹರಿವಿನ ಪ್ರಮಾಣದಷ್ಟೇ ನೀರನ್ನು ಹೊರಗೆ ಬಿಡಲಾಗುತ್ತಿದೆ ಎಂದು ಹೇಳಿದರು.