

ನವದೆಹಲಿ: ಬಸ್ಸೊಂದು ಕಂದಕಕ್ಕೆ ಉರುಳಿದ ಪರಿಣಾಮ 29 ಪ್ರಯಾಣಿಕರು ಮೃತಪಟ್ಟಿರುವ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ. ಬಸ್ ಹವೇಲಿ ಕಹುಟಾದಿಂದ ರಾವಲ್ಪಿಂಡಿಗೆ ತೆರಳುತ್ತಿತ್ತು. ಘಟನೆ ನಡೆದಾಗ ಬಸ್ಸಿನಲ್ಲಿ 30 ಮಂದಿ ಪ್ರಯಾಣಿಕರಿದ್ದರು ಎಂದು ವರದಿಯಾಗಿದೆ.
ಪರ್ವತ ಪ್ರದೇಶದಲ್ಲಿ (Ghat Section) ಸಂಭವಿಸಿದ ಅಪಘಾತಕ್ಕೆ ಈವರೆಗೆ ಕಾರಣ ತಿಳಿದು ಬಂದಿಲ್ಲ. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿರುವ ರಕ್ಷಣಾ ಇಲಾಖೆ ಹಾಗೂ ಪೊಲೀಸರು ಮರತದೇಹಗಳನ್ನು ಹೊರತೆಗೆಯುತ್ತಿದ್ದಾರೆ.
ಓರ್ವ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ಕಾರಣ ತಿಳಿಯದ ಕಾರಣ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಸ್ಟೇಷನ್ ಹೌಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.