

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 213 ಹೊಸ ಕೊವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, 180 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ.
ಸೋಂಕಿತರ ಸಂಖ್ಯೆ ಒಟ್ಟು 7213ಕ್ಕೆ ಏರಿದ್ದು, ಡಿಸ್ಚಾರ್ಜ್ ಆದವರ ಸಂಖ್ಯೆ 4135 ಹಾಗೂ ಮೃತರ ಸಂಖ್ಯೆ 88. ಸಕ್ರಿಯ ಕರೊನಾ ಪ್ರಕರಣಗಳು 2987.
24 ಗಂಟೆಯಲ್ಲಿ ಬೆಳಕಿಗೆ ಬಂದ ಕರೊನಾ ಸೋಂಕಿತರಲ್ಲಿ 23 ಮಂದಿ ಅಂತಾರಾಷ್ಟ್ರೀಯ ಪ್ರಯಾಣಿಕರು. 103 ಅಂತಾರಾಜ್ಯ ಪ್ರಯಾಣಿಕರಾಗಿದ್ದಾರೆ.
ಇಂದು ಕಲಬುರಗಿಯಲ್ಲಿ ಅತಿ ಹೆಚ್ಚು ಅಂದರೆ 48 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಬೆಂಗಳೂರು ನಗರದಲ್ಲಿ 35, ಧಾರವಾಡ 34, ದಕ್ಷಿಣ ಕನ್ನಡ 23, ರಾಯಚೂರು 18, ಯಾದಗಿರಿ 13, ಬೀದರ್ 11, ಬಳ್ಳಾರಿ 10, ಕೊಪ್ಪಳ 4, ವಿಜಯಪುರ, ಬಾಗಲಕೋಟೆ, ಶಿವಮೊಗ್ಗದಲ್ಲಿ ತಲಾ 3, ಉಡುಪಿ, ಹಾವೇರಿ, ರಾಮನಗರದಲ್ಲಿ ತಲಾ 2, ಹಾಸನ, ದಾವಣಗೆರೆಯಲ್ಲಿ ತಲಾ ಒಬ್ಬರಲ್ಲಿ ಕರೊನಾ ಸೋಂಕು ಕಾಣಿಸಿಕೊಂಡಿದೆ.