ಏ.15ರೊಳಗೆ ದ್ವಿತೀಯ ಪಿಯು ಫಲಿತಾಂಶ ಪ್ರಕಟ

result
Published on

ಬೆಂಗಳೂರು: ದ್ವಿತೀಯ ಪಿಯು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಪ್ರಗತಿಯಲ್ಲಿದ್ದು, ಏ.10ರಿಂದ 15ರೊಳಗೆ ಫಲಿತಾಂಶ ಪ್ರಕಟಿಸುವ ನಿರೀಕ್ಷೆ ಇದೆ.

ದ್ವಿತೀಯ ಪಿಯು ಮಾ.25ರಿಂದ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿದ್ದು, ಮೌಲ್ಯಮಾಪನ ಕಾರ್ಯ ಪ್ರಗತಿಯಲ್ಲಿದೆ. ಇದರ ಜತೆಗೆ 5,8 ಮತ್ತು 9ನೇ ಮೌಲ್ಯಾಂಕನ ಪರೀಕ್ಷೆಯ ಮೌಲ್ಯಮಾಪನ ಸಹ ತಾಲ್ಲೂಕು ಹಂತದಲ್ಲಿ ನಡೆಯುತ್ತಿದೆ. ಇದು ಸಹ ಏ.10ಕ್ಕೆ ಲಿತಾಂಶ ಪ್ರಕಟವಾಗುವ ಸಾಧ್ಯತೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವ್ಯಕ್ತಪಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net