ಆಗಸ್ಟ್ 3ರಿಂದ 2ನೇ ಸುತ್ತಿನ ಪಿಜಿ ದಂತವೈದ್ಯ ಸೀಟು ಹಂಚಿಕೆ

Medical Education
Published on

ಬೆಂಗಳೂರು ಸ್ನಾತಕೋತ್ತರ ದಂತ ವೈದ್ಯಕೀಯ (ಪಿಜಿಇಟಿ- ಎಂಡಿಎಸ್-24) ಕೋರ್ಸ್‌ನ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆ. 3ರಿಂದ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಮೊದಲನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿ ಆಯ್ಕೆ-2 ಆಯ್ಕೆ ಮಾಡಿ, ಶುಲ್ಕ ಪಾವತಿಸಿರುವವರು, ಆಯ್ಕೆ-3 ಅನ್ನು ಆಯ್ಕೆ ಮಾಡಿರುವವರು ಹಾಗೂ ಯಾವುದೇ ಸೀಟು ಹಂಚಿಕೆಯಾಗದೇ ಇರುವವರು ಆ.3ರಿಂದ ಕೆಇಎ ಕಚೇರಿಯಲ್ಲಿ ತಮ್ಮ ಎಲ್ಲ ಮೂಲ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ದಾಖಲೆ ಸಲ್ಲಿಸದಿದ್ದರೆ ಅಂತಹವರಿಗೆ ಸೀಟು ಹಂಚಿಕೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಎರಡನೇ ಸುತ್ತಿನ ಸೀಟು ಹಂಚಿಕೆಗೆ ಆ.3ರಂದು ಸೀಟ್ ಮ್ಯಾಟ್ರಿಕ್ಸ್ ಪ್ರಕಟಿಸಲಾಗುತ್ತದೆ. ಆ.4ರಿಂದ 6ರವರೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಸಮಯ ನೀಡಲಾಗುತ್ತದೆ. ಆ.7ರಂದು ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಹಾಗೂ ಆ.8ರಂದು ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ನಂತರ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಶುಲ್ಕ ಪಾವತಿಸಲು ಹಾಗೂ ಕಾಲೇಜಿಗೆ ವರದಿ ಮಾಡಿಕೊಳ್ಳಲು ಆ.13 ಕೊನೆ ದಿನ ಎಂದು ಅವರು ವಿವರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net