2ಎ ಮೀಸಲಾತಿ ಅನಿವಾರ್ಯ

web4
ಸವದತ್ತಿಯಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಬಸವಜಯ ಮೃತ್ಯುಂಜಯ ಶ್ರೀ ಅವರನ್ನು ಸನ್ಮಾನಿಸಲಾಯಿತು. ಅಲ್ಲಮಪ್ರಭು ಪ್ರಭುನವರ, ರಾಜಶೇಖರ್ ಕಾರದಗಿ ಇತರರಿದ್ದರು.
Published on

ಸವದತ್ತಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಅನಿವಾರ್ಯವಾಗಿದ್ದು, ಶ್ರಾವಣ ಮಾಸದಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಇಷ್ಟಲಿಂಗ ವಿಶೇಷ ಪೂಜೆಗಳ ಮೂಲಕ ಮತ್ತೆ ಹೋರಾಟ ಪ್ರಾರಂಭಿಸಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಪಟ್ಟಣದ ಸವದತ್ತಿ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಸಭಾಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿ, ಸಮುದಾಯದ ಮಕ್ಕಳ ಭವಿಷ್ಯಕ್ಕಾಗಿ ಮೀಸಲಾತಿ ಅವಶ್ಯವಾಗಿದೆ. ಬೇಡಿಕೆ ಈಡೇರುವವರೆಗೂ ಹೋರಾಟ ನಿರಂತರವಾಗಿರಲಿದೆ. ಲೋಕಸಭೆ ಚುನಾವಣೆ ಒಳಗೆ ಮೀಸಲಾತಿ ೋಷಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದ್ದೇವೆ. ಜತೆಗೆ ಎಲ್ಲ ಲಿಂಗಾಯತರಿಗೆ ಒಬಿಸಿ ಮೀಸಲಾತಿ ನೀಡಲು ಕೇಂದ್ರಕ್ಕೆ ಶಿಾರಸು ಮಾಡಲಿ. ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯಲ್ಲ ಎಂದರು.

ಸಮುದಾಯದ ತಾಲೂಕು ಅಧ್ಯಕ್ಷ ಅಲ್ಲಮಪ್ರಭು ಪ್ರಭುನವರ, ರಾಜಶೇಖರ್ ಕಾರದಗಿ, ಪಂಚನಗೌಡ ದ್ಯಾಮನಗೌಡರ, ಡಾ. ಬೆಂಡಿಗೇರಿ, ಸುರೇಶಗೌಡ ಬಡಗಿಗೌಡರ, ಸಿದ್ದು ಹೆಬ್ಬಳ್ಳಿ, ವಿರೂಪಾಕ್ಷಗೌಡ ಪಾಟೀಲ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net