

ಜಮ್ಮು ಕಾಶ್ಮೀರ: ಭಾನುವಾರ (ಅ.22) ರಾತ್ರಿ 11 ಗಂಟೆ ಸುಮಾರಿಗೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.
ಈ ಪ್ರದೇಶದಲ್ಲಿ 5 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ. ಭಾನುವಾರ ಬೆಳಗ್ಗೆ ನೇಪಾಳದಲ್ಲಿ 6.1 ತೀವ್ರತೆಯ ಮತ್ತೊಂದು ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ರಾಜಧಾನಿ ಕಠ್ಮಂಡುವಿನ ಪಶ್ಚಿಮಕ್ಕೆ 55 ಕಿ.ಮೀ ದೂರದಲ್ಲಿರುವ ಧಾಡಿಂಗ್‌ನಲ್ಲಿದೆ.
ತದನಂತರ ಭಾನುವಾರ ಸಂಜೆ 5:18ರ ಸುಮಾರಿಗೆ ಮತ್ತೊಂದು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3ರ ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ,(ಏಜೆನ್ಸೀಸ್).