ಫ್ರಿಜ್​ ಕಂಪ್ರೆಸರ್ ಸ್ಫೋಟ; ಒಂದೇ ಕುಟುಂಬದ ಐವರು ಸಾವು

3 children among 5 killed after fridge compressor explodes in Punjabs Jalandhar
Published on

ಪಂಜಾಬ್​​:  ಮನೆಯೊಂದರಲ್ಲಿ ಫ್ರಿಡ್ಜ್ ಕಂಪ್ರೆಸರ್ ಸ್ಫೋಟಗೊಂಡಿದ್ದು, ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಪಂಜಾಬ್‌ನ ಜಲಂಧರ್‌ನಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ.

ಯಶಪಾಲ್ ಘಾಯ್ (70), ರುಚಿ ಘಾಯ್ (40), ಮನ್ಶಾ (14), ದಿಯಾ (12) ಮತ್ತು ಅಕ್ಷಯ್ (10) ಮೃತರು. ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಸ್ಫೋಟದ ನಂತರ ಮನೆಗೆ ಬೆಂಕಿ ಹೊತ್ತಿಕೊಂಡಿದ್ದು, ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ.

ಐವರನ್ನು ಜಲಂಧರ್ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾದೆ ಸಾವನ್ನಪ್ಪಿದ್ದಾರೆ. ಸ್ಫೋಟ ನಡೆದ ಸ್ಥಳದಿಂದ ಕೆಲವು ಮಾದರಿಗಳನ್ನು ಸಂಗ್ರಹಿಸಲು ಮತ್ತು ಸ್ಫೋಟದ ನಿಖರವಾದ ಕಾರಣವನ್ನು ನಿರ್ಧರಿಸಲು ವಿಧಿವಿಜ್ಞಾನ ತಜ್ಞರ ತಂಡ ಶೋಧ ನಡೆಸುತ್ತಿದೆ.

ಜಲಂಧರ್‌ನ ಅವತಾರ್ ನಗರದಲ್ಲಿನ ಮನೆಯೊಂದರಲ್ಲಿ ಸ್ಫೋಟದ ರೀತಿಯ ಘಟನೆಯ ಬಗ್ಗೆ ನಮಗೆ ಮಾಹಿತಿ ಬಂದಿತು, ನಂತರ ನಾವು ತಕ್ಷಣ ಸ್ಥಳಕ್ಕೆ ತಲುಪಿದ್ದೇವೆ. ಅಪಘಾತದ ಹಿಂದಿನ ಕಾರಣವನ್ನು ನಾವು ತನಿಖೆ ಮಾಡುತ್ತಿದ್ದೇವೆ. ನಾವು ವಿಧಿವಿಜ್ಞಾನ ತಜ್ಞರ ತಂಡವನ್ನು ಕರೆಸಿದ್ದೇವೆ" ಎಂದು ಜಲಂಧರ್ ಹೆಚ್ಚುವರಿ ಉಪ ಆಯುಕ್ತರು ತಿಳಿಸಿದ್ದಾರೆ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net