3.15 ಕೋಟಿ ರೂ. ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ FIR ದಾಖಲು

Untitled design - 2025-08-09T122756.940
Published on

3.15 ಕೋಟಿ ರೂ. ವಂಚನೆ ಆರೋಪದ ಮೇಲೆ ಕನ್ನಡದ ಖ್ಯಾತ ನಟ ಧ್ರುವ ಸರ್ಜಾ ವಿರುದ್ಧ ಮುಂಬೈನ ಅಂಬೊಲಿ ಪೊಲೀಸ್​ ಠಾಣೆಯಲ್ಲಿ ಶನಿವಾರ ಪ್ರಕರಣ(FIR) ದಾಖಲಾಗಿದೆ.

ನಿರ್ಮಾಪಕ ರಾಘವೇಂದ್ರ ಹೆಗಡೆ ಎಂಬುವರು ಧ್ರುವ ಸರ್ಜಾ ವಿರುದ್ಧ ದೂರು ನೀಡಿದ್ದಾರೆ. ಸಿನಿಮಾ ಮಾಡುವುದಾಗಿ 3.15 ಕೋಟಿ ರೂ. ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಎಫ್‌ಐಆರ್‌ ಉಲ್ಲೇಖಿಸಲಾಗಿದೆ.

ರಾಘವೇಂದ್ರ ಹೆಗಡೆ ಹೇಳೊದೇನು?

ದಿ ಸೋಲ್ಜರ್ ಹೆಸರಿನ ಸಿನಿಮಾದ ಸ್ಕ್ರಿಪ್ಟ್ ಧ್ರುವ ಸರ್ಜಾಗೆ ನೀಡಲಾಗಿದೆ. ಸಿನಿಮಾ ಕಾಂಟ್ರ್ಯಾಕ್ಟ್ ಸಹಿ ಮಾಡುವುದಕ್ಕೂ ಮೊದಲು 3 ಕೋಟಿ ರೂಪಾಯಿ ಕೊಡುವಂತೆ ಧ್ರುವ ಕೇಳಿದ್ದರು. ಇದರಿಂದ ಫ್ಲ್ಯಾಟ್ ಖರೀದಿಸೋದಾಗಿ ಹೇಳಿದ್ದರು. ಸಿನಿಮಾದ ಕೆಲಸವನ್ನು ಶೀಘ್ರವೇ ಆರಂಭಿಸೋದಾಗಿ ತಿಳಿಸಿದ್ದರು. ಆದರೆ, ಈ ಸಿನಿಮಾದ ಶೂಟ್ ಜನವರಿ 2020ರಲ್ಲಿ ಪ್ರಾರಂಭವಾಗಿ ಜೂನ್ 2020ರೊಳಗೆ ಪೂರ್ಣಗೊಳ್ಳಬೇಕಿತ್ತು. ಆದರೆ ಹಣ ಪಡೆದ ನಂತರ, ಸರ್ಜಾ ಪದೇಪದೇ ಡೇಟ್ಸ್ ಮುಂದೆ ಹಾಕುತ್ತಲೇ ಬಂದಿದ್ದಾರೆ, ನಂತರ COVID-19 ಲಾಕ್‌ಡೌನ್ ನಂತರವೂ ಪ್ರತಿಕ್ರಿಯೆ ನೀಡಲಿಲ್ಲ ಎಂದು ಹೆಗಡೆ ಆರೋಪಿಸಿದ್ದಾರೆ.

3.15 ಕೋಟಿ ರೂ ಕೊಟ್ಟಾಗಿನಿಂದ ಅಂದರೆ, 2018ರಿಂದ 18% ಬಡ್ಡಿದರದಲ್ಲಿ ಒಟ್ಟಾರೆ ನಷ್ಟ 9.58 ಕೋಟಿಗೂ ಮೀರಿದೆ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ವಂಚನೆ ಪ್ರಕರಣ ದಾಖಲಿಸಲಾಗಿದೆ ಎಂದು ರಾಘವೇಂದ್ರ ಹೆಗ್ಡೆ ಅಂಬೋಲಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net