ರೈಲು ಅಪಘಾತ: ಲೋಕೋ ಪೈಲಟ್‌ಗಳು ಸೇರಿದಂತೆ ಮೂವರು ಸಾವು..! goods trains collide

goods trains collide
Published on

ಜಾರ್ಖಂಡ್‌ : ( goods trains collide ) ಜಾರ್ಖಂಡ್‌ನ ಸಾಹಿಬ್‌ಗಂಜ್‌ನಲ್ಲಿ ಗಂಭೀರ ರೈಲು ಅಪಘಾತ ಸಂಭವಿಸಿದೆ. ಎರಡು ಸರಕು ರೈಲುಗಳು ಒಂದಕ್ಕೊಂದು ಡಿಕ್ಕಿ ಹೊಡೆದ ಪರಿಣಾಮ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡು ಎರಡೂ ಎಂಜಿನ್‌ಗಳು ಹೊತ್ತಿ ಉರಿಯಲಾರಂಭಿಸಿದವು. ಅಪಘಾತದಲ್ಲಿ ಲೋಕೋ ಪೈಲಟ್‌ಗಳು ಸೇರಿದಂತೆ ಮೂವರು ಪ್ರಾಣ ಕಳೆದುಕೊಂಡಿದ್ದಾರೆ.

ಘಟನೆಯಲ್ಲಿ ಮೂವರು ಸಿಐಎಸ್‌ಎಫ್ ಅಧಿಕಾರಿಗಳು ಕೂಡ ಗಾಯಗೊಂಡಿದ್ದಾರೆ. ಈ ಘಟನೆ ಬೆಳಗಿನ ಜಾವ 3.30ಕ್ಕೆ ನಡೆದಿದೆ ಎಂದು ವರದಿಯಾಗಿದೆ. ಫರಕ್ಕಾದಿಂದ ಲಾಲ್ಮಾಟಿಯಾಗೆ ಹೋಗುತ್ತಿದ್ದ ಸರಕು ರೈಲು ಬರ್ಹೆಟ್‌ನಲ್ಲಿ ನಿಂತಿದ್ದ ಸರಕು ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಸ್ಥಳೀಯ ವರದಿಗಳ ಪ್ರಕಾರ, ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಅಗ್ನಿಶಾಮಕ ದಳದವರಿಗೆ ಬಹಳ ಕಷ್ಟವಾಯಿತು. ಈ ಬಗ್ಗೆ ಸಂಪೂರ್ಣ ಮಾಹಿತಿ ಇನ್ನೂ ತಿಳಿದುಬಂದಿಲ್ಲ.

ಮಾರ್ಚ್ 31 ರ ಭಾನುವಾರದಂದು ಒಡಿಶಾದಲ್ಲಿ ರೈಲು ಅಪಘಾತ ಸಂಭವಿಸಿದೆ. ಕಾಮಾಕ್ಯ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳು ಹಳಿತಪ್ಪಿದವು. ಕಟಕ್‌ನ ನೆರ್ಗುಂಡಿ ರೈಲು ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಅಸ್ಸಾಂನ ಕಾಮಾಕ್ಯ ನಿಲ್ದಾಣಕ್ಕೆ ತೆರಳುತ್ತಿದ್ದಾಗ ರೈಲು ಸಂಖ್ಯೆ 12251 ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net