ಚಾಲಕನ ನಿಯಂತ್ರಣ ತಪ್ಪಿದ ಕಾರು ಅಪಘಾತ; ಮೂವರು ಸ್ಥಳದಲ್ಲೇ ದುರ್ಮರಣ | Accident

ವಿಜಯವಾಣಿ - 2025-01-24T124822.281
Published on

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿದ ಕಾರು ಉರುಳಿ ಬಿದ್ದು, ಮೂವರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ (Road Accident) ವಿಜಾಪುರ-ಸೋಲಾಪುರ ರಾಷ್ಟ್ರೀಯ ಹೆದ್ದಾರಿ 50ರ ಕನ್ನಾಳ ಕ್ರಾಸ್ ಬಳಿ ಶುಕ್ರವಾರ (ಜ.24) ಬೆಳಗ್ಗೆ ಸಂಭವಿಸಿದೆ.

ವಿಜಯಪುರ ನಗರದ ಅಭಿಷೇಕ್ ಸಾವಂತ್ (23), ವಿಜಯಕುಮಾರ್ ಔರಂಗಾಬಾದ್ ( 24) ಮತ್ತು ರಾಜು ಬಿರಾದಾರ (23) ಸಾವಿಗೀಡಾಗಿದ್ದಾರೆ. ಕಾರಿನಲ್ಲಿ ಐವರು ಸೋಲಾಪುರದಿಂದ ವಿಜಯಪುರಕ್ಕೆ ವಾಪಸ್ ಬರುವಾಗ ಈ ದುರ್ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.

ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net