

ಭೋಪಾಲ್: ಸಮಾನ ವಸ್ತ್ರಸಂಹಿತೆಯನ್ನು ಹಲವು ವರ್ಷಗಳಿಂದ ಪಾಲಿಸಿಕೊಂಡು ಬರುತ್ತಿದ್ದ ಶಿಕ್ಷಣ ಕೇಂದ್ರಗಳಲ್ಲಿ ಹಿಜಾಬ್-ಕೇಸರಿ ಶಲ್ಯ ಸದ್ದನ್ನು ಮಾಡಿತ್ತಿವೆ. ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಗಂಗಾ ಜಮ್ನಾ ಶಾಲೆಯ ಹಿಜಾಬ್ ವಿವಾದದಲ್ಲಿ ಪ್ರಮುಖ ಬೆಳವಣಿಗೆಯಾಗಿದ್ದು, ಶಾಲೆಯ ಪ್ರಾಂಶುಪಾಲರು ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಗಂಗಾ ಜಮುನಾ ಹೈಯರ್ ಸೆಕಂಡರಿ ಶಾಲೆಯ ಬ್ಯಾನರ್ ಒಂದರಲ್ಲಿ ಹಿಂದೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿರುವ ಫೋಟೋಗಳು ವೈರಲ್ ಆಗಿವೆ. ಪೊಲೀಸರು ಶಾಲಾ ಆಡಳಿತದ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 295, 506 ಮತ್ತು ಬಾಲಾಪರಾಧಿ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ದಾಮೋಹ್ ಎಸ್‌ಪಿ ರಾಕೇಶ್ ಸಿಂಗ್ ಮಾತನಾಡಿ, 'ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು,ಬಂಧಿತ ವ್ಯಕ್ತಿಗಳಲ್ಲಿ ಶಾಲೆಯ ಪ್ರಾಂಶುಪಾಲರು, ಶಿಕ್ಷಕ ಮತ್ತು ಭದ್ರತಾ ಸಿಬ್ಬಂದಿ ಸೇರಿದ್ದಾರೆ. ಉಳಿದ ಆರೋಪಿಗಳನ್ನು ಹಿಡಿಯಲು ಶೋಧ ನಡೆಸಲಾಗುತ್ತಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ' ಎಂದು ಅವರು ಮಾಹಿತಿ ನೀಡಿದ್ದಾರೆ.
"ನಿನ್ನೆ, ಇಬ್ಬರು - ಮೂರು ಹುಡುಗಿಯರ ಹೇಳಿಕೆಗಳು ಮುನ್ನೆಲೆಗೆ ಬಂದಿವೆ. ನಂತರ ಅವರ ಹೇಳಿಕೆಯನ್ನು ಪರಿಗಣಿಸಲು ಯೋಗ್ಯವಾಗಿದೆ ಎಂದು ಭಾವಿಸಲಾಗಿದೆ ಮತ್ತು ತನಿಖಾ ಸಮಿತಿಯು ಆ ಹೇಳಿಕೆಯನ್ನು ನಮಗೆ ಕಳುಹಿಸಿದೆ. 'ಈಗ ಶಾಲಾ ಆಡಳಿತ ಮಂಡಳಿಗೆ ಸಂಬಂಧಿಸಿದವರ ಹೇಳಿಕೆಗಳನ್ನು ದಾಖಲಿಸಿಕೊಂಡು ಅದರ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
'ರಾಜ್ಯದ ಕೆಲವೆಡೆ ಧಾರ್ಮಿಕ ಮತಾಂತರದ ಷಡ್ಯಂತ್ರಗಳು ನಡೆಯುತ್ತಿದ್ದು, ಅವುಗಳನ್ನು ಸಫಲವಾಗಲು ಬಿಡುವುದಿಲ್ಲ. ಇಡೀ ರಾಜ್ಯದಲ್ಲಿ ಮದರಸಾಗಳೇ ಅಥವಾ ಶಿಕ್ಷಣ ನೀಡಲಾಗುತ್ತಿದೆಯೇ ಎಂಬುದರ ಕುರಿತು ತನಿಖೆ ನಡೆಸುವಂತೆ ಸೂಚನೆ ನೀಡಿದ್ದೇವೆ. ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು" ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದರು.