ವಿಶಾಖಪಟ್ಟಣಂ: ಭೀಕರ ರಸ್ತೆ ಅಪಘಾತ, 3 ಸ್ಥಳದಲ್ಲೇ ಸಾವು, 10 ಮಂದಿಗೆ ಗಂಭೀರ ಗಾಯ

ap
Published on

ಅಮರಾವತಿ: ಪ್ರವಾಸಕ್ಕೆ ತೆರಳುತ್ತಿದ್ದ ವ್ಯಾನ್​ಗೆ ಮತ್ತು ಟ್ರಕ್​ ನಡುವೆ ನಡೆದ ಭೀಕರ ಅಪಘಾತದಲ್ಲಿ ಸುಮಾರು ಮೂವರು ಸಾವನ್ನಪ್ಪಿದ್ದು 10 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ.

ಅಪಘಾತದಲ್ಲಿ ಜಿಲ್ಲೆಯ ಹನುಮಂತು ಆನಂದ ರಾವ್ (45), ಹನುಮಂತು ಶೇಖರ್ ರಾವ್ (15), ಮತ್ತು ಚಿಂತಾಡಿ ಇಂದು (65) ಎಂದು ಗುರುತಿಸಲಾಗಿದೆ. ಇವರು ಪಶ್ಚಿಮ ಗೋದಾವರಿ ಜಿಲ್ಲೆಯವರು ಎನ್ನಲಾಗಿದೆ.

ಈ ಬೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಕೂಡಲೇ ಸ್ಥಳಕ್ಕೆ ಧಾವಿಸಿದ ಆಂಬುಲೆನ್ಸ್, ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಪೊಲೀಸರು ಸ್ಥಳಕ್ಕೆ ಧಾವಿಸಿ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಮೃತರನ್ನು ಶವಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು ಪೊಲೀಸರು ಹೆಚ್ಚಿನ ತನಿಖೆ ಆರಂಭಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net