

ನವದೆಹಲಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯ ಬಡಾಪುರ ಮೇಲ್ಸೇತುವೆಯಲ್ಲಿ ನಡೆದಿದೆ.
ಘಟನೆ ಶನಿವಾರ ತಡರಾತ್ರಿ 12:48ರ ಸುಮಾರಿಗೆ ನಡೆದಿದ್ದು, ಮೃತರನ್ನು ರಾಜ್ (21), ಸಂಜು (38) ಹಾಗೂ ದಿನೇಶ್ (22) ಎಂದು ಗುರುತಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿಪಿ (ಆಗ್ನೇಯ) ರಾಜೇಶ್ ಡಿಯೋ, ಫರಿದಾಬಾದ್ನಲ್ಲಿ ಮದುವೆ ಕಾರ್ಯಕ್ರಮ ಒಂದನ್ನು ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ವೇಳೆ ಬಾದರ್ಪುರ್ ಮೇಲ್ಸೇತುವೆಯಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಏಮ್ಸ್ಗೆ ದಾಖಲಿಸಲಾಗಿದ್ದು, ಲಾರಿ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಡಿಸಿಪಿ (ಆಗ್ನೇಯ) ರಾಜೇಶ್ ಡಿಯೋ ಮಾಹಿತಿ ನೀಡಿದ್ದಾರೆ.