ಚನ್ನೇಗೌಡನಕೊಪ್ಪಲು ಡೇರಿಗೆ 3 ಲಕ್ಷ ರೂ. ಲಾಭ

19BTP01
Published on

ಬೆಟ್ಟದಪುರ: ಚನ್ನೇಗೌಡನಕೊಪ್ಪಲಿನ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘವು 2022-23ನೇ ಸಾಲಿನಲ್ಲಿ 3,73,035 ರೂ. ನಿವ್ವಳ ಲಾಭ ಗಳಿಸಿದೆ ಎಂದು ಮೈಮುಲ್ ವಿಸ್ತರಣಾಧಿಕಾರಿ ಸತೀಶ್ ಹೇಳಿದರು.


ಸಂಘದ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ವಾರ್ಷಿಕ ಸಭೆಯಲ್ಲಿ ಮಾತನಾಡಿದ ಅವರು, ಸಂಘವು ಉತ್ತಮ ಲಾಭಾಂಶ ಪಡೆಯುತ್ತಿದೆ. ಸಂಘದ ಅಭಿವೃದ್ಧಿಗೆ ಪ್ರತಿಯೊಬ್ಬ ಸದಸ್ಯರ ಸಹಕಾರ ಪ್ರಮುಖವಾಗಿದೆ. ಗುಣಮಟ್ಟದ ಹಾಲು ಪೂರೈಕೆ ಮಾಡುವ ಮೂಲಕ ಹೆಚ್ಚಿನ ಆದಾಯ ಗಳಿಸಿ ಹಾಗೂ ಮೈಮುಲ್ ವತಿಯಿಂದ ಸಿಗುವಂತಹ ಎಲ್ಲ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದರು.


ಕಾರ್ಯಕ್ರಮದಲ್ಲಿ ಅತಿ ಹೆಚ್ಚು ಹಾಲು ಸರಬರಾಜು ಮಾಡಿದ ಮೂವರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷೆ ಸರಸ್ವತಿ, ಉಪಾಧ್ಯಕ್ಷೆ ರಾಜೇಶ್ವರಿ, ನಿರ್ದೇಶಕಿಯರಾದ ಭಾಗ್ಯಮ್ಮ, ವನಜಾಕ್ಷಿ, ಕೆ.ಎಸ್. ಅನಿತಾ, ಪೂರ್ಣಿಮಾ, ಲತಾ, ವೀಣಾ, ರೂಪಾ, ಕಾರ್ಯದರ್ಶಿ ಸವಿತಾ, ಸಿಬ್ಬಂದಿ ಭಾರತಿ, ಪಂಕಜಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net