ಜೋಗ ಜಲಪಾತ ಪ್ರವೇಶಕ್ಕೆ 3 ತಿಂಗಳ ನಿರ್ಬಂಧ

Jogfols in sagar dist
ಸಾಗರ ತಾಲೂಕಿನ ವಿಶ್ವವಿಖ್ಯಾತ ಜೋಗ ಜಲಪಾತ
Published on

ಶಿವಮೊಗ್ಗ: ಸಾಗರ ತಾಲೂಕಿನ ವಿಶ್ವವಿಖ್ಯಾತ ಜೋಗ ಜಲಪಾತದ ವೀಕ್ಷಣೆಗೆ ಜಿಲ್ಲಾಡಳಿತ 3 ತಿಂಗಳು ನಿರ್ಬಂಧ ವಿಧಿಸಿದೆ.

ಜಲಪಾತದ ಮುಖ್ಯದ್ವಾರ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಜನವರಿ 1ರಿಂದ ಮಾರ್ಚ್ 15ರವರೆಗೆ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆ ಆಗಬಾರದೆಂಬ ಕಾರಣದಿಂದ ಪ್ರವೇಶ ನಿರ್ಬಂಧಿಸಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ(08182-251444)ಯನ್ನು ಸಂಪರ್ಕಿಸಬಹುದು ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net