ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲು! ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ

ವಿಜಯವಾಣಿ (72)
Published on

ಚೆನ್ನೈ: ಬೇಸಿಗೆ ಕಾವು ಹೆಚ್ಚಿದ ಹಿನ್ನೆಲೆ ನದಿಯಲ್ಲಿ ಈಜಾಡಲು ತೆರಳಿದ್ದ ಚೆನ್ನೈನ ಮೂವರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ವರದಿಯಾಗಿದೆ.

ಮೂವರು ವಿದ್ಯಾರ್ಥಿಗಳು ಚೆನ್ನೈನ ಖಾಸಗಿ ಫಿಸಿಯೋಥೆರಪಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು ಎಂದು ವರದಿ ಹೇಳಿದೆ. ಈಜಲು ನದಿಗೆ ಇಳಿದಿದ್ದ ಮೂವರು ದುರ್ಮರಣ ಹೊಂದಿದ ಸುದ್ದಿ ತಿಳಿದ ಪೋಷಕರು ಕಣ್ಣೀರಿಟ್ಟಿದ್ದು, ಕಾಲೇಜಿನ ಸ್ನೇಹಿತರು ಸ್ಥಳಕ್ಕೆ ಧಾವಿಸಿ ಪೊಲೀಸರಿಗೆ ಹೆಚ್ಚಿನ ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿಗಳ ವಿವರ ಪಡೆದುಕೊಂಡ ಪೊಲೀಸರು, ರಕ್ಷಣಾ ಪಡೆಯ ಸಹಾಯದಿಂದ ಮೃತದೇಹಗಳನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಸ್ತುತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net