VIDEO| ತೆರೆದ ಬೋರ್‌ವೆಲ್‌ಗೆ ಬಿದ್ದ 3 ವರ್ಷದ ಮಗುವಿನ ರಕ್ಷಣೆ, ಎನ್‌ಡಿಆರ್‌ಎಫ್ ಸಿಬ್ಬಂದಿಗೆ ವ್ಯಾಪಕ ಪ್ರಶಂಸೆ

bihar boy save
Published on

ನಳಂದ: ಕೊಳವೆ ಬಾವಿಗೆ ಬಿದ್ದ ನಾಲ್ಕು ವರ್ಷದ ಬಾಲಕನನ್ನು ರಕ್ಷಣಾ ಸಿಬ್ಬಂದಿ ರಕ್ಷಿಸುವಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಸಿಬ್ಬಂದಿ ಜೀವಂತವಾಗಿ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಇಂದು ಬೆಳಿಗ್ಗೆ ಬಿಹಾರದ ನಳಂದ ಜಿಲ್ಲೆಯ ಕುಲ್ ಗ್ರಾಮದಲ್ಲಿ ಮಹಿಳೆಯೊಬ್ಬಳು ಕೆಲಸಕ್ಕೆಂದು ಹೋಗಿದ್ದ ವೇಳೆ ತನ್ನ ಮಗನನ್ನು ಕರೆದೊಯ್ದಿದ್ದಳು. ಈ ವೇಳೆ ಶಿವಂ ಎಂಬ ಮಗು ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿತ್ತು. ಸುದ್ದಿಯನ್ನು ತಿಳಿದು ಸ್ಥಳಕ್ಕಾಗಮಿಸಿದ ಎನ್​ಡಿಆರ್​ಎಫ್​​​ ತಂಡವು, ಸುಮಾರು 40-50 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದನ್ನು ಪತ್ತೆ ಹಚ್ಚಿ ಮಗುವಿಗೆ ಪೈಪ್​ ಮೂಲಕ ಆಮ್ಲಜನಕ ಪೂರೈಕೆ ಮಾಡಿತ್ತು.

ಸತತ 5 ಗಂಟೆಗಳ ಕಾಲ ಜೆಸಿಬಿ ಮೂಲಕ ಕಾರ್ಯಾಚರಣೆಯನ್ನು ನಡೆಸಿದ ಎನ್​​ಡಿಆರ್​​ಎಫ್​​ ತಂಡವು ಮಗುವನ್ನು ಜೀವಂತವಾಗಿ ಹೊರತೆಗೆದಿದ್ದು, ಮಗುವಿನ ಆರೋಗ್ಯದ ದೃಷ್ಟಿಯಿಂದ ಮಗುವನ್ನು ಹೊರತೆಗೆದ ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಮೂಲಕ ಎನ್‌ಡಿಆರ್‌ಎಫ್ ಸಿಬ್ಬಂದಿಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ರೈತನೊಬ್ಬ ಬೋರ್‌ವೆಲ್ ಅಗೆದು ಅದನ್ನು ಮುಚ್ಚದೆ ಬಿಟ್ಟಿದ್ದರಿಂದ ಘಟನೆ ಸಂಭವಿಸಿತ್ತು.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net