

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಿ ಸರ್ಕಾರ ಆದೇಶಿಸಿದೆ.
ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ ೩ ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ. ಆದ್ದರಿಂದ ಸೆ. ೧೪ ರ ಕನ್ನಡ ಭಾಷಾ ಪರೀಕ್ಷೆ ಸೆ. ಮತ್ತು ೧೫ ಸ್ಫರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಅಧಿಸೂಚನೆಯಲ್ಲಿನ ಹುದ್ದೆಗಳಿಗೆ ಇತರೆ ದಿನಾಂಕಗಳಲ್ಲಿ ನಿಗದಿಪಡಿಸಲಾಗಿದ್ದ ನಿರ್ದಿಷ್ಟ ಪತ್ರಿಕೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ. ಸರ್ಕಾರದ ಆದೇಶದಂತೆ ವಯೋಮಿತಿ ಸಡಿಲಿಕೆ ನೀಡಿ ಅಭ್ಯರ್ಥಿಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಕಾಲಾವಕಾಶ ಮುಕ್ತಾಯವಾದ ನಂತರ ಪರಿಷ್ಕೃತ ದಿನಾಂಕವನ್ನು ತಿಳಿಸಲಾಗುವುದು ಎಂದು ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯದರ್ಶಿ ತಿಳಿಸಿದ್ದಾರೆ.