3 ದಿನಗಳ ಅಧ್ಯಯನ ಶಿಬಿರ ಅರ್ಜಿ ಆಹ್ವಾನ

application
Published on

ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು ಆಗಸ್ಟ್ 3 ನೇ ವಾರ ಅಥವಾ ಕೊನೆಯ ವಾರದಲ್ಲಿ ನಡೆಸಲು ಅರ್ಜಿ ಆಹ್ವಾನಿಸಲಾಗಿದೆ.

 ಆಸಕ್ತಿಯಿರುವ 20 ರಿಂದ 40 ವರ್ಷ ವಯಸ್ಸುಳ್ಳ ಈಗಾಗಲೇ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿರುವವರು, ಪತ್ರಿಕೋದ್ಯಮ ಪದವಿ ಪಡೆದವರು ಹಾಗೂ ಆಸಕ್ತಿ ಯುಳ್ಳವರು ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನಾಂಕವಾಗಿರುತ್ತದೆ.

 ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‌ಸೈಟ್ https://sahithyaacademy.karanataka.gov.in ಮೂಲಕ ಅರ್ಜಿ ನಮೂನೆಯನ್ನು ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಕರಿಯಪ್ಪ ಎನ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net