ಮನುಷ್ಯನ ದೇಹದಲ್ಲಿ ಶೇ.30ರಷ್ಟು ಪ್ಲಾಸ್ಟಿಕ್

eeshwaravana
Published on

ಶಿವಮೊಗ್ಗ: ಕಳೆದ ಒಂಬತ್ತು ವರ್ಷಗಳಿಗೆ ಹೋಲಿಸಿದರೆ ಈಗ ಮರಣೋತ್ತರ ಪರೀಕ್ಷೆ ಸಂದರ್ಭದಲ್ಲಿ ಮನುಷ್ಯನ ದೇಹದಲ್ಲಿ ಶೇ.30ರಷ್ಟು ಪ್ಲಾಸ್ಟಿಕ್ ರಾಸಾಯನಿಕ ಅಂಶ ಕಂಡುಬರುತ್ತಿದೆ. ಪ್ಲಾಸ್ಟಿಕ್ ಬಳಕೆ ಮತ್ತು ಅದು ನಮ್ಮ ದೇಹವನ್ನು ಸೇರುತ್ತಿರುವ ಪ್ರಮಾಣ ಹೆಚ್ಚುತ್ತಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್.ಸಂತೋಷ್ ಕಳವಳ ವ್ಯಕ್ತಪಡಿಸಿದರು.

ನವ್ಯಶ್ರೀ ಈಶ್ವರವನ ಚಾರಿಟೆಬಲ್ ಟ್ರಸ್ಟ್ ಹಾಗೂ ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್‌ನಿಂದ ಗುರುವಾರ ಅಬ್ಬಲಗೆರೆ ಬಳಿಯ ಈಶ್ವರವನದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮರಕ್ಕೆ ಕಂಕಣ ಧಾರಣೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಪ್ಲಾಸ್ಟಿಕ್ ಕವರ್‌ಗಳನ್ನು ಎಲ್ಲೆಂದರಲ್ಲಿ ಬಿಸಾಡದೆ ನಿರ್ದಿಷ್ಟ ಸ್ಥಳದಲ್ಲಿ ಹಾಕಬೇಕು. ತರಕಾರಿ, ದಿನಸಿ ಮತ್ತಿತರ ವಸ್ತುಗಳ ಖರೀದಿ ಸಂದರ್ಭದಲ್ಲಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಬೇಕು. ಪಾಸ್ಲಿಕ್ ಬದಲು ಬಟ್ಟೆ ಚೀಲ ಬಳಸುವಂತೆ ಮಕ್ಕಳಿಗೆ ಸಲಹೆ ನೀಡಿದರು.

ನವ್ಯಶ್ರೀ ಈಶ್ವರವನ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಎಂ.ವಿ.ನಾಗೇಶ್, ವಾಸವಿ ಮಹಿಳಾ ಸಂಘದ ಅಧ್ಯಕ್ಷೆ ಪ್ರತಿಭಾ ಅರುಣ್, ಪ್ರಮುಖರಾದ ಟಿ.ಸುಧೀರ್, ಎಂ.ಮಂಜುನಾಥ್, ನಾಗರಾಜ್ ಶೆಟ್ಟರ್, ಜ್ಯೋತಿ, ಪ್ರದೀಪ್, ಶರಣ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net