ಮುತ್ತತ್ತಿ ಬಳಿ ಕ್ಯಾಂಟರ್​ ಪಲ್ಟಿ; ದೇಗುಲದಿಂದ ವಾಪಸ್​ ಬರುತ್ತಿದ್ದ 30 ಮಂದಿಗೆ ಗಾಯ

Accident_ydxssrp_EXi3o6q
Published on

ಮಂಡ್ಯ: ಕ್ಯಾಂಟರ್​ ಪಲ್ಟಿಯಾಗಿ 30 ಮಂದಿ ಗಾಯಗೊಂಡ ಘಟನೆ ಮಳವಳ್ಳಿ ತಾಲೂಕಿನ ಮುತ್ತತ್ತಿ ಬಳಿ ನಡೆದಿದೆ.

ಮುತ್ತತ್ತಿಯ ಮುತ್ತೆತ್ತರಾಯಸ್ವಾಮಿ ದೇವಾಲಯಕ್ಕೆ ತೆರಳಿದ್ದ ಮಂಡ್ಯ ತಾಲೂಕಿನ ಟಿ.ಮಲ್ಲಿಗೆರೆ ಗ್ರಾಮಸ್ಥರು ಪೂಜೆ ಮುಗಿಸಿ ವಾಪಸ್​ ಬರುವಾಗ ಅವಘಡ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಗಾಯಾಳುಗಳಿಗೆ ಹಲಗೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿತ್ತು, ಹಲಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net