ಪ್ರಧಾನಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ; 300 ಮಂದಿ ಸಾವು, ಹಿಂದೂ ದೇವಾಲಯಗಳು ಧ್ವಂಸ

Bangla Protest
Published on

ಢಾಕಾ: ಬಾಂಗ್ಲಾದೇಶ ಪ್ರಧಾನಿ ಶೇಖ್​ ಹಸೀನಾ ವಿರುದ್ಧ ನಡೆಸಲಾಗುತ್ತಿರುವ ಅಸಹಾಕರ ಚಳುವಳಿಯೂ ಪ್ರತಿಭಟನಾಕಾರರ ಮತ್ತು ಅಡಳಿತ ಅವಾಮಿ ಲೀಗ್ ಬೆಂಬಲಿಗರ ನಡುವಿನ ಸಂಘರ್ಷಕ್ಕೆ ಕಾರಣವಾಗಿದ್ದು, ಹಿಂಸಾಚಾರದಲ್ಲಿ 300ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಘರ್ಷಣೆಯಲ್ಲಿ 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ಆಗಸ್ಟ್​ 04ರಂದು ಪ್ರತಿಭಟನಾಕಾರರು ಅಸಹಕಾರ ಚಳುವಳಿ ಆರಂಭಿಸಿದ್ದರು. ಇದಕ್ಕೆ ಅವಾಮಿ ಲೀಗ್, ಛಾತ್ರಾ ಲೀಗ್ ಮತ್ತು ಜುಬೋ ಲೀಗ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಯಿತ್ತು. ಈ ವೇಳೆ ಘರ್ಷಣೆ ಉಂಟಾಗಿದ್ದು, 300ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.

ಘರ್ಷಣೆಯಲ್ಲಿ ಇಸ್ಕಾನ್​, ಕಾಳಿ ಸೇರಿದಂತೆ ಹಿಂದೂ ದೇವಾಲಯಗಳನ್ನು ಧ್ವಂಸ ಮಾಡಲಾಗಿದೆ. ಘರ್ಷಣೆ ಸಂಬಂಧ ಭಾರತೀಯರು ಮನೆಯಿಂದ ಹೊರಬಾರದಂತೆ ವಿದೇಶಾಂಗ ರಾಯಭಾರಿ ಇಲಾಖೆ ಸೂಚಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಇಂಟರ್​ನೆಟ್​ ಸೇವೆ ಹಾಗೂ ರಾಷ್ಟ್ರವ್ಯಾಪಿ ಅನಿರ್ದಿಷ್ಟಾವಧಿ ಕರ್ಫ್ಯೂ ವಿಧಿಸಲಾಗಿದೆ.

ಈ ಕುರಿತು ಮಾತನಾಡಿರುವ ಪ್ರಧಾನಿ ಶೇಖ್​ ಹಸೀನಾ, ದೇಶಾದ್ಯಂತ ವಿಧ್ವಂಸಕ ಕೃತ್ಯಗಳಲ್ಲಿ ತೊಡಗುವವರು ವಿದ್ಯಾರ್ಥಿಗಳಲ್ಲ ಆದರೆ ಭಯೋತ್ಪಾದಕರು ಎಂದು ಪ್ರಧಾನಿ ಹಸೀನಾ ಹೇಳಿದ್ದಾರೆ. ಇದೀಗ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವವರು ವಿದ್ಯಾರ್ಥಿಗಳಲ್ಲ, ರಾಷ್ಟ್ರವನ್ನು ಅಸ್ಥಿರಗೊಳಿಸಲು ಹೊರಟಿರುವ ಭಯೋತ್ಪಾದಕರು. ಅವರನ್ನು ದೃಡವಾಗಿ ನಿಗ್ರಹಿಸಬೇಕಿದೆ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net