3030 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರು

RemasterDirector_22abe5b5f
RemasterDirector_22abe5b5f
Published on

ಪಿರಿಯಾಪಟ್ಟಣ: ತಾಲೂಕಿನಲ್ಲಿ ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 3030 ವಿದ್ಯಾರ್ಥಿಗಳು ಹಾಜರಾಗಿ ಯಶಸ್ವಿಯಾಗಿ ಪರೀಕ್ಷೆ ಬರೆದರು.


ಸೋಮವಾರ ನಡೆದ ಕನ್ನಡ ಭಾಷೆ ಪರೀಕ್ಷೆಗೆ 3031 ರೆಗ್ಯುಲರ್ ವಿದ್ಯಾರ್ಥಿಗಳು ಮತ್ತು 14 ಪುನರಾವರ್ತಿತ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 3045 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಅವರಲ್ಲಿ 15 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರ


ತಾಲೂಕಿನ 12 ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿಗಳು, ಸಿಬ್ಬಂದಿ ಮತ್ತು ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ನಿಷೇಧಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಮೊಬೈಲ್, ಸ್ಮಾರ್ಟ್ ವಾಚ್, ಮತ್ತಿತರ ಎಲೆಕ್ಟ್ರಾನಿಕ್ ಉಪಕರಣಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು.


ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು, ತುರ್ತು ಆರೋಗ್ಯ ಚಿಕಿತ್ಸೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಇಲಾಖೆ ಸಿಬ್ಬಂದಿ ಹಾಜರಾಗಿದ್ದರು. ಹಿರಿಯ ಅಧಿಕಾರಿಗಳನ್ನು ಪ್ರತಿಯೊಂದು ಪರೀಕ್ಷಾ ಕೇಂದ್ರಗಳಿಗೆ ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನಾಗಿ ನೇಮಿಸಲಾಗಿತ್ತು. ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಈ ಬಾರಿ ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆ ಮಾಡಿದ್ದು ವಿಶೇಷವಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net