ಕೃಷಿ ಇಲಾಖೆಯಲ್ಲಿ ಏಕ ಕಾಲಕ್ಕೆ 306 ಅಧಿಕಾರಿಗಳಿಗೆ ಬಡ್ತಿ

Chaluvarayaswamy
Published on

ಬೆಂಗಳೂರು: ಕೃಷಿ ಇಲಾಖೆಯಲ್ಲಿ ಏಕ ಕಾಲಕ್ಕೆ 306 ಅಧಿಕಾರಿಗಳಿಗೆ ಪದೋನ್ನತಿ ನೀಡಿ ಆದೇಶ ಹೊರಡಿಸಲಾಗಿದೆ.

ಮೂರು ವರ್ಷಗಳಿಂದ ವಿವಿಧ ಕಾರಣಗಳಿಂದ ನನೆಗುದಿ ಬಿದ್ದಿದ್ದ ಬಡ್ತಿ ಪ್ರಕ್ರಿಯೆ ಗಮನಿಸಿದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಎಲ್ಲ ಅರ್ಹರಿಗೆ ಪದೋನ್ನತಿ ನೀಡುವಂತೆ ಸೂಚಸಿ, ಅಂತಿಮ ಪಟ್ಟಿ ಸಿದ್ದಪಡಸಿ ಅನುಮೋದನೆ ನೀಡಿದ್ದಾರೆ. ಈ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕ ಹುದ್ದೆಗಳಿಗೂ ಹೆಚ್ಚಿನ ಆದ್ಯತೆ ನೀಡಿರುವುದು ವಿಶೇಷವಾಗಿದೆ.

ಕೃಷಿ ಸಚಿವರ ಆದೇಶದಂತೆ ಇತ್ತಿಚೆಗೆ 248 ಸಹಾಯಕ ಕೃಷಿ ಅಧಿಕಾರಿಗಳಿಗೆ ಕೃಷಿ ಅಧಿಕಾರಿಗಳ ಹುದ್ದೆಗೆ ಬಡ್ತಿ ನೀಡಿದ್ದರು.

ಚಲುವರಾಯಸ್ವಾಮಿ ಅವರು ಕೃಷಿ ಸಚಿವರಾದ ನಂತರ ಕಳೆದ 6 ತಿಂಗಳ ಒಳಗೆ 550ಕ್ಕೂ ಅಧಿಕ ಅಧಿಕಾರಿಗಳಿಗೆ ಮುಂಬಡ್ತಿ ಸಿಕ್ಕಂತಾಗಿದೆ. ಇದಲ್ಲದೆ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಸಾವಿರಕ್ಕೂ ಅಧಿಕ ವಿವಿಧ ತಾಂತ್ರಿಕ (ಕೃಷಿ ಅಧಿಕಾರಿ) ಹುದ್ದೆಗಳನ್ನು ಭರ್ತಿ ಮಾಡಲು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಇನ್ನೇನು ಅನುಮೋದನೆ ಹಂತದಲ್ಲಿದೆ ಎಂದು ತಿಳಿದುಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net