ಅವಧಿ ಮೀರಿ ಪಟಾಕಿ ಸಿಡಿಸಿದವರ ವಿರುದ್ಧ 324 ಎಫ್ಐಆರ್

pataki
Published on

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದೀಪಾವಳಿ ಹಬ್ಬದಲ್ಲಿ ಅಕ್ರಮವಾಗಿ ಮಾರಾಟ ಮತ್ತು ನಿಗದಿತ ಅವಧಿ ಮೀರಿ ಪಟಾಕಿ ಸಿಡಿಸಿದ ಆರೋಪದಡಿ 324 ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದಾರೆ.

ಹಬ್ಬದ ಸಂದರ್ಭದಲ್ಲಿ ದುರ್ಘಟನೆಗಳು ನಡೆಯದಂತೆ ನಗರದ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನ.10 ರಿಂದ ನ.14ರ ವರೆಗೆ ಪಟಾಕಿ ಮಾರಾಟ ಮತ್ತು ಪಟಾಕಿ ಸಿಡಿಸುವಿಕೆ ಬಗ್ಗೆ ತೀವ್ರ ನಿಗಾವಹಿಸಲಾಗಿತ್ತು. ಎಸಿಪಿ ನೇತೃತ್ವದಲ್ಲಿ ಅಗ್ನಿಶಾಮಕ, ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳು ಒಳಗೊಂಡ ಟಾಸ್ಕ್‌ಫೋರ್ಸ್ (ಕಾರ್ಯಪಡೆ) ರಚಿಸಲಾಗಿತ್ತು.

ನಾಲ್ಕು ದಿನಗಳ ಕಾಲ ಲೈಸೆನ್ಸ್‌ದಾರರನ್ನು ಹೊರತುಪಡಿಸಿ ಅಕ್ರಮವಾಗಿ ಪಟಾಕಿ ಮಾರಾಟ ಮಾಡಿದ ಆರೋಪದಡಿ 19 ಪ್ರಕರಣ ದಾಖಲಿಸಲಾಗಿದೆ. ಅಂತೆಯೇ ನಿಗದಿತ ಸಮಯ ಮೀರಿ ಪಟಾಕಿ ಸಿಡಿಸಿದ ಆರೋಪದಡಿ 305 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net