ಶಾಲಾ ವಾಹನ ಚಾಲಕರ ವಿರುದ್ಧ 338 ಕೇಸ್

DD
Published on

ಬೆಂಗಳೂರು: ರಾಜಧಾನಿಯಲ್ಲಿ ಶಾಲಾ ವಾಹನ ಚಾಲಕರ ವಿರುದ್ಧ ಟ್ರಾಫಿಕ್ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಸಂಚಾರ ನಿಯಮ ಉಲ್ಲಂಸಿದ 338 ಚಾಲಕರ ವಿರುದ್ಧ ಕೇಸ್ ದಾಖಲಿಸಿದ್ದಾರೆ.

ಮಂಗಳವಾರ ಬೆಳಗ್ಗೆ 7.30ರಿಂದ 9.30ರ ನಡುವೆ ನಗರದ ಎಲ್ಲೆಡೆ ಕಾರ್ಯಾಚರಣೆ ನಡೆಸಿದ ಸಂಚಾರ ಪೊಲೀಸರು, 2059 ಶಾಲಾ ವಾಹನಗಳನ್ನು ತಪಾಸಣೆಗೆ ಒಳಪಡಿಸಿದ್ದಾರೆ. ಇದರಲ್ಲಿ ಏಳು ವಾಹನ ಚಾಲಕರು ಮದ್ಯ ಸೇವನೆ ಮಾಡಿರುವುದು ಮತ್ತು 331 ವಾಹನಗಳಲ್ಲಿ ನಿಗದಿಗಿಂತ ಹೆಚ್ಚುವರಿ ಮಕ್ಕಳನ್ನು ಕರೆದುಕೊಂಡು ಹೋಗುತ್ತಿರುವುದು ಕಂಡು ಬಂದಿದೆ.

ತಪ್ಪಿತಸ್ಥರ ವಿರುದ್ಧ ಕೇಸ್ ದಾಖಲಿಸಲಾಗಿದ್ದು, ವಿಶೇಷ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net