

ನವದೆಹಲಿ: ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road Accident) 37 ಮಂದಿ ಮೃತಪಟ್ಟು ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಗ್ನೇಯ ಬ್ರೆಜಿಲ್ನ ಮಿನಾಸ್ ಗೆರೈಸ್ನ ಹೆದ್ದಾರಿಯಲ್ಲಿ ನಡೆದಿದೆ.
ಬಸ್ಸಿನಲ್ಲಿ ಸುಮಾರು 45 ಮಂದಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದ್ದು, ಅಪಘಾತದಲ್ಲಿ ಗಾಯಗೊಂಡಿರುವ 13 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಕುರಿತು ಮಾಹಿತಿ ನೀಢಿರುವ ಅಗ್ನಿಶಾಮಕ ಇಲಾಖೆಯ ಅಧಿಕಾರಿಯೊಬ್ಬರು ಬಸ್ಸಿನ ಟೈರ್ ಸ್ಫೋಟಗೊಂಡ ಪರಿಣಾಮ ದುರ್ಘಟನೆ ಸಂಭವಿಸಿದ್ದು, ಮೃತದೇಹಗಳನ್ನು ಹೊರತೆಗೆಯಲಾಗುತ್ತಿದೆ. ಇದಲ್ಲದೆ ಕೆಲವು ಪ್ರತ್ಯಕ್ಷದರ್ಶಿಗಳು ಬಸ್ಸಿಗೆ ಗ್ರಾನೈಟ್ ತಗುಲಿದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಹೇಳಿದ್ದು, ಈ ಸಂಬಂಧ ತನಿಖೆಗೆ ಆದೇಶಿಸಲಾಗಿದೆ ಎಂದು ಅಗ್ನಿಶಾಮಕ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.