ಕೆಯುಡಬ್ಲೂಜೆ 37ನೇ ಸಮ್ಮೇಳನದ ಪತ್ರಕರ್ತ ಸ್ಮರಣ ಸಂಚಿಕೆ ಬಿಡುಗಡೆ

Patrakarta
Published on

ಬೆಂಗಳೂರು:
ವಿಜಯಪುರದಲ್ಲಿ ನಡೆದ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ (ಕೆಯುಡಬ್ಲೂೃಜೆ) ಸಂಘ ಆಯೋಜಿಸಿದ್ದ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಪತ್ರಕರ್ತ ಸ್ಮರಣ ಸಂಚಿಕೆಯನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ವಿಧಾನಸೌಧದಲ್ಲಿ ಬಿಡುಗಡೆ ಮಾಡಿದರು. ದಾವಣಗೆರೆಯಲ್ಲಿ ನಡೆಯುವ 38ನೇ ರಾಜ್ಯ ಸಮ್ಮೇಳನಕ್ಕೆ ಎಲ್ಲ ನೆರವು ನೀಡಲಾಗುವುದು ಎಂದು ಭರವಸೆ ನೀಡಿ ಶುಭ ಹಾರೈಸಿದರು.
ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಖಜಾಂಚಿ ವಾಸುದೇವ ಹೊಳ್ಳ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net