388 ನ್ಯಾಯಾಧೀಶರ ವರ್ಗಾವಣೆ

highcourt
Published on

ಬೆಂಗಳೂರು: ರಾಜ್ಯದ ನಾನಾ ನ್ಯಾಯಾಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ 388 ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಮುಖ್ಯ ನ್ಯಾಯಮೂರ್ತಿಗಳ ನಿರ್ದೇಶನದಂತೆ ಆದೇಶ ಹೊರಡಿಸಲಾಗಿದ್ದು, ವರ್ಗಾವಣೆಗಳು ಮೇ 27ರಿಂದ ಜಾರಿಗೆ ಬರಲಿವೆ ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್.ಭರತ್ ಕುಮಾರ್ ತಿಳಿಸಿದ್ದಾರೆ.

ವರ್ಗಾವಣೆ ಪಟ್ಟಿಯನ್ನು ಹೈಕೋರ್ಟ್‌ನ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಆರು ಜಿಲ್ಲಾ ನ್ಯಾಯಾಧೀಶರು ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರನ್ನು ಬೇರೆ ಬೇರೆ ರಿಜಿಸ್ಟ್ರಾರ್‌ಗಳ ಹುದ್ದೆಗಳಿಗೆ ವರ್ಗಾವಣೆ ಮಾಡಲಾಗಿದೆ. ಅಂತೆಯೇ 62 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಿದ್ದು, 16 ಹಿರಿಯ ಸಿವಿಲ್ ನ್ಯಾಯಾಧೀಶರಿಗೆ ಪದೋನ್ನತಿ ನೀಡಿ ವರ್ಗಾವಣೆ ಮಾಡಲಾಗಿದೆ. ಅಂತೆಯೇ 166 ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ 138 ಸಿವಿಲ್ ನ್ಯಾಯಾಧೀಶರನ್ನು ಬೇರೆ ಬೇರೆ ಸ್ಥಳಗಳಿಗೆ ನಿಯೋಜನೆ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net