394 ಡಿಡಿ ಪ್ರಕರಣ ದಾಖಲು

Untitled design - 2024-11-02T190729.600
Published on

ಬೆಂಗಳೂರು: ಮದ್ಯ ಸೇವಿಸಿ ವಾಹನ ಚಲಾಯಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಮುಂದುವರಿಸಿರುವ ಸಂಚಾರ ಪೊಲೀಸರು, ಕಳೆದ ಏಳು ದಿನಗಳಲ್ಲಿ 394 ಪಾನಮತ್ತ ಚಾಲಕರು/ಸವಾರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ನಗರ ಸಂಚಾರ ಪೊಲೀಸರು ೫೦ ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಅ.೨೮ರಿಂದ ನ.೩ರ ವರೆಗೆ ಡ್ರಂಕ್ ಆ್ಯಂಡ್ ಡ್ರೈವ್ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ವಿವಿಧ ಮಾದರಿಯ ಒಟ್ಟು ೧೮,೫೦೨ ವಾಹನಗಳ ಚಾಲಕರನ್ನು ತಪಾಸಣೆ ಮಾಡಲಾಗಿದ್ದು, ಈ ಪೈಕಿ ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ ೩೯೪ ಮಂದಿ ಚಾಲಕರು/ಸವಾರರ ವಿರುದ್ಧ ಕೇಂದ್ರ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಜತೆಗೆ ಅತಿವೇಗದಿಂದ ವಾಹನ ಚಲಾಯಿಸುವವರ ವಿರುದ್ಧವೂ ವಿಶೇಷ ಕಾರ್ಯಾಚರಣೆ ನಡೆಸಿರುವ ಸಂಚಾರ ಪೊಲೀಸರು ಕಳೆದ ಏಳು ದಿನಗಳಲ್ಲಿ ೧೨೮ ಪ್ರಕರಣ ದಾಖಲಿಸಿದ್ದು, ೧.೨೯ ಲಕ್ಷ ರೂ.ದಂಡ ವಸೂಲಿ ಮಾಡಿದ್ದಾರೆ. ಈ ಡ್ರಂಕ್ ಆ್ಯಂಡ್ ಡ್ರೈವ್ ವಿರುದ್ಧದ ವಿಶೇಷ ಕಾರ್ಯಾಚರಣೆ ಹಾಗೂ ಅತಿವೇಗ ವಾಹನ ಚಾಲನೆ ವಿರುದ್ಧದ ವಿಶೇಷ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net