3ನೇ ಹಂತದ ಪಿಎಂಶ್ರೀ ಶಾಲೆ ಆಯ್ಕೆ ಪ್ರಕ್ರಿಯೆ ಆರಂಭ: ಅರ್ಜಿ ಆಹ್ವಾನ

PMShri
Published on

ಬೆಂಗಳೂರು ಪಿಎಂಶ್ರೀ ಶಾಲೆಗಳ ಮೂರನೇ ಹಂತದ ಆಯ್ಕೆ ಪ್ರಕ್ರಿಯೆ ಆರಂಭವಾಗಿದ್ದು, ಶಾಲೆಗಳು ಅರ್ಜಿ ಸಲ್ಲಿಸಲು ಮೇ 15 ಕೊನೆಯ ದಿನವಾಗಿದೆ.

ಶಾಲೆಗಳನ್ನು ಸಲ್ಲಿಸಿದ ಅರ್ಜಿಗಳನ್ನು ಜಿಲ್ಲಾ ಹಂತದಲ್ಲಿ ಪರಿಶೀಲಿಸಲು ಮೇ 23 ಮತ್ತು ರಾಜ್ಯದ ಹಂತದಲ್ಲಿ ಪರಿಶೀಲಿಸಲು ಮೇ 31 ಕೊನೆಯ ದಿನವಾಗಿದೆ ಎಂದು ಸಮಗ್ರ ಶಿಕ್ಷಣ ಕರ್ನಾಟಕ ತಿಳಿಸಿದೆ.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಂಪೂರ್ಣವಾಗಿ ದೇಶಾದ್ಯಂತ ಜಾರಿಗೊಳಿಸುವ ಉದ್ದೇಶದಿಂದ ಪಿಎಂಶ್ರೀ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಮೊದಲ ಹಂತದಲ್ಲಿ 2023-24ನೇ ಸಾಲಿನಲ್ಲಿ ಮತ್ತು ಎರಡನೇ ಹಂತದಲ್ಲಿ 2024-25ನೇ ಸಾಲಿಗೆ ಶಾಲೆಗಳನ್ನು ಆಯ್ಕೆ ಮಾಡಿದೆ. 3ನೇ ಹಂತದಲ್ಲಿ ಶಾಲೆಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಆರಂಭವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net