ಮೇಘಾಲಯದ ಪೂರ್ವ ಜೈನ್ತಿಯಾ ಕಾಡಿನಲ್ಲಿ ಮೃತದೇಹಗಳ ಪತ್ತೆ!

v
Published on

ಶಿಲ್ಲಾಂಗ್: ಮೇಘಾಲಯದ ಪೂರ್ವ ಜೈನ್ತಿಯಾ ಹಿಲ್ಸ್ ಜಿಲ್ಲೆಯ ದೂರದ ಹಳ್ಳಿಯೊಂದರಲ್ಲಿ ನಾಲ್ಕು ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಕೈ ಕಾಲು ಕಟ್ಟಿ ಹಾಕಿದ್ದ ಸ್ಥಿತಿಯಲ್ಲಿ ಹಾಗೂ ಕುತ್ತಿಗೆ ಮೇಲೆ ಗಾಯದ ಗುರುತುಗಳಿರುವ ನಾಲ್ಕು ಮೃತದೇಹಗಳು ಉಂಪ್ಲೆಂಗ್ ಗ್ರಾಮದ ಹೊರವಲಯದಲ್ಲಿರುವ ಕಾಡಿನಲ್ಲಿ ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಶನಿವಾರ ಬೆಳಗ್ಗೆ ಕಾರ್ಮಿಕರು ಮೃತ ದೇಹಗಳನ್ನು ಪತ್ತೆ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. "ಮೃತರು ಹೊರ ರಾಜ್ಯದವರು ಎಂದು ಶಂಕಿಸಲಾಗಿದೆ. ಆದರೆ ಸೂಕ್ತ ತನಿಖೆ ನಂತರ ಸತ್ಯಾಂಶ ಹೊರಬರಲಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಗಿರಿ ಪ್ರಸಾದ್ ತಿಳಿಸಿದ್ದಾರೆ.

ಇಲ್ಲಿಯೇ ಹತ್ಯೆ ಮಾಡಲಾಗಿದೆಯೇ ಅಥವಾ ಬೇರೆಡೆ ಕೊಲೆಗೈದು ಶವಗಳನ್ನು ಉಂಪ್ಲೆಂಗ್‌ನಲ್ಲಿ ತಂದು ಹಾಕಲಾಗಿದೆಯೇ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net