ಕಾರು-ಟ್ರಕ್‌ ನಡುವೆ ಭೀಕರ ಅಪಘಾತ! ನಾಲ್ವರು ಸ್ಥಳದಲ್ಲೇ ಸಾವು

ವಿಜಯವಾಣಿ - 2024-01-27T115416.548
Published on

ಪಂಜಾಬ್: ವೇಗವಾಗಿ ಚಲಿಸುತ್ತಿದ್ದ ಕಾರೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ (ಜ.27) ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ವರದಿಯಾಗಿದೆ. ಅಧಿಕಾರಿಗಳ ಪ್ರಕಾರ, ಜಮ್ಮು-ಜಲಂಧರ್ ರಾಷ್ಟ್ರೀಯ ರಾಜ್ಯ ಹೆದ್ದಾರಿಯಲ್ಲಿ ಎರಡೂ ವಾಹನಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಬೆಂಕಿ ಹೊತ್ತಿ ಉರಿದಿದೆ.

ಘಟನೆ ನಡೆದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಗಾಯಾಳುಗಳನ್ನು ದಾಸುಹಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅಮೃತಸರ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತು. ಘಟನೆ ಕಂಡ ಪ್ರತ್ಯಕ್ಷದರ್ಶಿಗಳು, "ಕಾರು ಮತ್ತು ಟ್ರಕ್ ನಡುವೆ ಅಪಘಾತ ಸಂಭವಿಸಿತು. ಅದನ್ನು ನಾವು ಕಣ್ಣಾರೆ ಕಂಡೆವು. ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ವಿಷಯವನ್ನು ತಕ್ಷಣ ಪೊಲೀಸರಿಗೆ ತಿಳಿಸಿದೆವು ಎಂದು ಹೇಳಿದ್ದಾರೆ.

ನಾಲ್ಕು ಜನರು ಮೃತಪಟ್ಟಿರುವುದು ದೃಢಪಟ್ಟಿದೆ. ಆದರೆ ಮತ್ತೊಬ್ಬರ ಸ್ಥಿತಿ ಚಿಂತಾಜನಕವಾಗಿತ್ತು, ಅವರನ್ನು ಆಸ್ಪತ್ರೆಗೆ ಕಳುಹಿಸಲಾಯಿತು. ಎರಡೂ ವಾಹನಗಳು ವಿರುದ್ಧ ದಿಕ್ಕಿನಿಂದ ಬರುತ್ತಿದ್ದವು. ಕಾರು ಸಿಎನ್‌ಜಿಯಲ್ಲಿ ಓಡುತ್ತಿದ್ದ ಕಾರಣ ಡಿಕ್ಕಿ ಹೊಡೆದ ಕೂಡಲೇ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net