ಮಂಗಳೂರು ಲಾಡ್ಜ್‌ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

sucide
Published on

ಮಂಗಳೂರು: ನಗರದ ಕೆ.ಎಸ್.ರಾವ್ ರಸ್ತೆಯಲ್ಲಿರುವ ಲಾಡ್ಜೊಂದರಲ್ಲಿ ಮೈಸೂರು ಮೂಲದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ.


ಮೈಸೂರು ವಿಜಯನಗರದ ದೇವೇಂದ್ರ, ಅವರ ಪತ್ನಿ ನಿರ್ಮಲಾ ಹಾಗೂ ಅವಳಿ ಮಕ್ಕಳಾದ ಚೈತನ್ಯಾ ಹಾಗೂ ಚೈತ್ರಾ ಆತ್ಮಹತ್ಯೆಗೆ ಮಾಡಿಕೊಂಡವರು. ಎರಡು ದಿನಗಳಿಂದ ಲಾಡ್ಜ್‌ನಲ್ಲಿ ವಾಸ್ತವ್ಯ ಇದ್ದ ಕುಟುಂಬ ಶುಕ್ರವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.


ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್‌ನೋಟ್ ಬರೆದಿಟ್ಟಿರುವುದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net