

ಬುಲಂದ್‌ಶಹರ್: ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡಿ ವಿಗ್ರಹಗಳನ್ನು ವಿರೂಪಗೊಳಿಸಿರುವ ಆಘಾತಕಾರಿ ಘಟನೆ ಉತ್ತರಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ನಡೆದಿದೆ.
ಬುಧವಾರ ತಡರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಶಿವ ಹಾಗೂ ಆಂಜನೇಯನ ವಿಗ್ರಹ ಸೇರಿದಂತೆ ನಾಲ್ಕು ದೇವಾಲಯಗಳ 12 ವಿಗ್ರಹಗಳನ್ನು ಕಿಡಿಗೇಡಿಗಳು ವಿರೂಪಗೊಳಿಸಿದ್ದಾರೆ. ದುಷ್ಕರ್ಮಿಗಳಿಂದ ದಾಳಿಗೊಳಗಾದ ದೇವಾಲಯಗಳಲ್ಲಿ ಒಂದು, 100 ವರ್ಷಗಳಷ್ಟು ಹಳೆಯದು ಎಂದು ಭಾವಿಸಲಾಗಿದೆ.
ಇನ್ನು, ಈ ಕುರಿತು ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿ, ಹಿಂದೂಗಳ ಭಾವನೆಗಳಿಗೆ ಧಕ್ಕೆಯಾಗಿದೆ. ಈ ಪ್ರಕರಣದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದು, ಕಿಡಿಗೇಡಿಗಳನ್ನು ಬಂಧಿಸುವುದಾಗಿ ಭರವಸೆ ನೀಡಿದ್ದಾರೆ.(ಏಜೆನ್ಸೀಸ್)